ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ರಾಜ್ಯೋತ್ಸವ ರತ್ನ ಪ್ರಶಸ್ತಿಗೆ ಆಯ್ಕೆ

Last Updated 16 ನವೆಂಬರ್ 2021, 12:41 IST
ಅಕ್ಷರ ಗಾತ್ರ

ಬೀದರ್: ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ವತಿಯಿಂದ ನೀಡಲಾಗುವ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ 8 ಮಂದಿ ಮಹಿಳಾ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಎಸ್.ಕೆ. ತಿಳಿಸಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಡಾ. ಜಗದೇವಿ ಗಾಯಕವಾಡ(ಸಾಹಿತ್ಯ), ಮಲ್ಲಮ್ಮ ಪಾಟೀಲ ಭಾಲ್ಕಿ (ಶರಣ ಸಾಹಿತ್ಯ), ಸುನೀತಾ ಪಾಟೀಲ (ದೈಹಿಕ ಶಿಕ್ಷಣ), ಸುನೀತಾ ದಾಡಗೆ (ನಾಡು, ನುಡಿ ಸೇವೆ), ಸುಷ್ಮಿತಾ ಮೋರೆ (ಮಾಧ್ಯಮ), ಬುದ್ಧದೇವಿ ಸಂಗಮ (ಶಿಕ್ಷಣ), ಸಾರಿಕಾ ಗಂಗಾ (ಉನ್ನತ ಶಿಕ್ಷಣದಲ್ಲಿ ಸಾಧನೆ) ಮತ್ತು ಸುನೀತಾ ಡೊಣಗಾಂವ (ಸಂಶೋಧನೆ) ಸೇರಿದ್ದಾರೆ ಎಂದು ಹೇಳಿದ್ದಾರೆ.
ನವೆಂಬರ್ 27 ರಂದು ಬೆಳಿಗ್ಗೆ 11ಕ್ಕೆ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

* * *
ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಹೆಸರು ನೋಂದಾಯಿಸಿ

ಬೀದರ್: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ನೌಬಾದ್‍ನಲ್ಲಿ ಸ್ವಂತ ಉದ್ಯೋಗ ಆರಂಭಿಸುವವರಿಗೆ ಉದ್ಯಮಶೀಲತಾ ಅಭಿವೃದ್ಧಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

18 ವರ್ಷದಿಂದ 45 ವರ್ಷದ ಒಳಗಿನ ಆಸಕ್ತ ಅಭ್ಯರ್ಥಿಗಳು ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ನೌಬಾದ್‍ನ ಉಪ ನಿರ್ದೇಶಕರ ಕಚೇರಿ, ಖಾದಿ ಮತ್ತು ಗ್ರಾಮೀಣ ಕೈಗಾರಿಕೆಗಳು, ಜಿಲ್ಲಾ ಕೈಗಾರಿಕಾ ಕೇಂದ್ರ, ಬೀದರ್ ಈ ವಿಳಾಸಕ್ಕೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9164499110. 9743012315 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT