ಬುಧವಾರ, ಅಕ್ಟೋಬರ್ 20, 2021
24 °C

ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಪದಾಧಿಕಾರಿಗಳು: ಅರುಣ ಬೀದರ್(ಅಧ್ಯಕ್ಷ), ಸುರೇಖಾ, ವಿನ್ಸೆಂಟ್ (ಉಪಾಧ್ಯಕ್ಷರು), ರಾಜಶೇಖರ (ಕಾರ್ಯದರ್ಶಿ), ಸಿದ್ದು, ರವಿ ವರ್ಮ (ಜಂಟಿ ಕಾರ್ಯದರ್ಶಿ).
ಸಮಾವೇಶ: ನಗರದ ಖಾಸಗಿ ಹೊಟೇಲ್‍ನಲ್ಲಿ ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದಿಂದ ನೌಕರರ ಸಮಾವೇಶ ನಡೆಯಿತು.
ಇಲಾಖೆ ಗುತ್ತಿಗೆ ನೌಕರರ ಸೇವೆ ಮುಂದುವರಿಸಿ ಸೇವಾ ಭದ್ರತೆ ಒದಗಿಸಬೇಕು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಹೇಶ ನಾಡಗೌಡ ಹೇಳಿದರು.
ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ನೌಕರರು ಕೋವಿಡ್ ವಾರಿಯರ್‍ಗಳಾಗಿ ಕೆಲಸ ಮಾಡಿದ್ದಾರೆ. ಹಲವು ಹೋರಾಟಗಳ ಫಲವಾಗಿ ಮತ್ತೆ ಮೂರು ತಿಂಗಳ ಅವಧಿಗೆ ಅವರ ಸೇವೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.
ಸಿದ್ದು ನಿರೂಪಿಸಿದರು. ರಾಜಶೇಖರ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.