ಬೀದರ್: ‘ಜಿಲ್ಲೆಯ ಎಲ್ಲ ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಪ್ರಸ್ತಾವ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿರುವ ಕೆರೆಗಳ ಸ್ಥಿತಿಗತಿಯ ಬಗ್ಗೆ ಸಣ್ಣ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಹಾಗೂ ಇನ್ನಿತರೆ ಅಧಿಕಾರಿಗಳಿಂದ ವಿವರಣೆ ಪಡೆದುಕೊಂಡರು.

‘ಒತ್ತುವರಿಯಾಗಿರುವ ಕೆರೆಗಳನ್ನು ಗುರುತಿಸಿ, ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡಬೇಕು. ಕೆರೆಯಲ್ಲಿನ ನೀರು ಕಲುಷಿತವಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಕೆರೆಗಳಿಗೆ ಮಲಿನ ನೀರು ಸೇರದಂತೆ ಎಚ್ಚರ ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನೀರು ಬಳಕೆದಾರರ ಸಂಘಗಳನ್ನು ಸಂಘಗಳನ್ನು ರಚಿಸುವ ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ್, ಸಣ್ಣ ನೀರಾವರಿ ಇಲಾಖೆಯ ಬೀದರ್ ವಿಭಾಗದ ಎಂಜಿನಿಯರ್ ಸುರೇಶ ಮೇಧಾ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಎಂಜಿನಿಯರ್ ಬಾಬು ಪವಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿದ್ಯಾನಂದ.ಸಿ, ನಗರಸಭೆಯ ಸಹಾಯಕ ಎಂಜಿನಿಯರ್ ರಾಜಶೇಖರ ಮಠ, ಮೀನುಗಾರಿಕೆ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.