ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಇಪಿ, ಟಿಎಸ್‌ಪಿ ಯೋಜನೆ: ಪ್ರಗತಿ ಪರಿಶೀಲನೆ

Last Updated 18 ಜನವರಿ 2022, 15:08 IST
ಅಕ್ಷರ ಗಾತ್ರ

ಬೀದರ್‌: ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ‘ವಿಶೇಷ ಯೋಜನೆಗಳ ಪ್ರಗತಿಯಲ್ಲಿ ಶೇಕಡ 80ಕ್ಕಿಂತ ಕಡಿಮೆ ಸಾಧನೆ ತೋರಿದ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿ ಮಾಡಲು ಸೂಚನೆ ನೀಡಿದರು. ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು‘ ಎಂದು ತಿಳಿಸಿದರು.

‘ಪ್ರತಿ ತಿಂಗಳು 15ನೇ ತಾರೀಖಿನಂದು ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಸಭೆ ನಡೆಯುತ್ತದೆ. ಒಂದು ವೇಳೆ ಆ ದಿನ ರಜೆ ಇದ್ದರೆ ಮರುದಿವಸ ಸಭೆ ನಡೆಯುತ್ತದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು’ ಎಂದು ಹೇಳಿದರು.

‘ಎಸ್‌ಇಪಿ ಮತ್ತು ಟಿಎಸ್‌ಪಿ ಯೋಜನೆಗಳಲ್ಲಿ ಶೇ.80ರಷ್ಟು ಸಾಧಿಸಿರುವವರು ಶೇ. 90ರಷ್ಟು ಪ್ರಗತಿ ಸಾಧಿಸಬೇಕು’ ಎಂದು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೇಶ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT