ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಕ್ರೈಸ್ತ ಧರ್ಮೀಯರಿಗೆ ಪ್ರತ್ಯೇಕ ಮೀಸಲಾತಿ: ಐವನ್‌ ಡಿಸೋಜಾ

Published 28 ಡಿಸೆಂಬರ್ 2023, 16:01 IST
Last Updated 28 ಡಿಸೆಂಬರ್ 2023, 16:01 IST
ಅಕ್ಷರ ಗಾತ್ರ

ಬೀದರ್‌: ‘ಕ್ರೈಸ್ತ ಧರ್ಮೀಯರು ರಾಜ್ಯದಲ್ಲಿ ಬಹಳ ಹಿಂದುಳಿದಿದ್ದು, ಪ್ರತ್ಯೇಕವಾಗಿ ಶೇ 2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಕ್ರಿಶ್ಚಿಯನ್‌ ಅಭಿವೃದ್ಧಿ ಸಮಿತಿ ಸದಸ್ಯ ಐವನ್‌ ಡಿಸೋಜಾ ತಿಳಿಸಿದರು.

ನಗರದಲ್ಲಿ ಕೈಗೆತ್ತಿಕೊಂಡಿರುವ ಕ್ರೈಸ್ತ ಸಮುದಾಯ ಭವನ ನಿರ್ಮಾಣ ಕಾಮಗಾರಿಯನ್ನು ಗುರುವಾರ ವೀಕ್ಷಿಸಿ, ನಂತರ ಸಮಿತಿ ಪ್ರಗತಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ತೆಲಂಗಾಣ, ಆಂಧ್ರ ಪ್ರದೇಶದ ಮಾದರಿಯಲ್ಲಿ ಕ್ರೈಸ್ತರಿಗೆ ಪ್ರತ್ಯೇಕವಾಗಿ ಮೀಸಲಾತಿ ಕಲ್ಪಿಸಿ ಶೈಕ್ಷಣಿಕ, ಆರ್ಥಿಕವಾಗಿ ಮುಂದೆ ಬರಬೇಕಿದೆ. ಕ್ರೈಸ್ತರ ಅಭಿವೃದ್ಧಿಗಾಗಿ ಬೀದರ್‌ ಜಿಲ್ಲೆಗೆ ₹20 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಚರ್ಚ್‌ ದುರಸ್ತಿ, ಆವರಣ ದುರಸ್ತಿ, ಸ್ಮಶಾನ ಭೂಮಿ ಕಾಂಪೌಂಡ್‌ ನಿರ್ಮಾಣ, ಸಮುದಾಯ ಭವನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಎರಡು ಮತ್ತು ಮೂರನೇ ಹಂತದ ಬಾಕಿ ಕಾಮಗಾರಿಗಳ ಅನುದಾನವನ್ನು ಫೆಬ್ರುವರಿಯೊಳಗೆ ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಅವಿನಾಶ, ಕ್ರೈಸ್ತ ಸಮಾಜದ ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ, ಜಾರ್ಜ್‌, ಫರ್ನಾಂಡಿಸ್‌  ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT