ಶುಕ್ರವಾರ, ಫೆಬ್ರವರಿ 28, 2020
19 °C

ಶಾಹಿನ್ ಶಾಲೆ: ದೂರು ವಾಪಸ್‌ಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೀದರ್ ಶಾಹಿನ್ ಶಾಲೆ ಹಾಗೂ ಪೋಷಕರ ವಿರುದ್ಧ ದಾಖಲಿಸಿರುವ ದೇಶದ್ರೋಹ ಪ್ರಕರಣವನ್ನು ವಾಪಸ್ ಪಡೆಯುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬುಧವಾರ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿ ಒತ್ತಾಯಿಸಿತು.

ಭೇಟಿ ನಂತರ ಮಾತನಾಡಿದ ಶಾಸಕ ರಮೇಶ್ ಕುಮಾರ್, ‘ನಾಟಕ ಪ್ರದರ್ಶಿಸಿದರೆ, ಪೌರತ್ವ (ತಿದ್ದುಪಡಿ) ಕಾಯ್ದೆ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೆ ದೇಶದ್ರೋಹವಾಗುವುದೆ’ ಎಂದು ಪ್ರಶ್ನಿಸಿದರು.

ಮಕ್ಕಳು ಬಳಸಿರುವ ಭಾಷೆ ದೇಶದ್ರೋಹ ಎಂದು ಹೇಳಲಾಗುತ್ತಿದ್ದು, ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ವಾರದಲ್ಲಿ ಐದು ಬಾರಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಕ್ಕಳ ಮೇಲೆ ದೇಶದ್ರೋಹದ ಆರೋಪ ಮಾಡುವುದು ಆಕ್ಷೇಪಾರ್ಹ. ವಿದ್ಯಾರ್ಥಿನಿ ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಅವರಿಗೆ ದೇಶದ್ರೋಹ ಎಂದರೇನು ಎಂಬುದೇ ಗೊತ್ತಿಲ್ಲ. ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲಿನ ನೂರಾರು ಮಕ್ಕಳು ಊಟ, ನೀರು ಬಿಟ್ಟಿದ್ದಾರೆ. ಮಕ್ಕಳ ಬಗ್ಗೆಯಾದರೂ ಇವರಿಗೆ ಮಾನವೀಯತೆ ಬೇಡವೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ಬಿಜೆಪಿ ಸರ್ಕಾರ ತನಗೆ ಬೇಕಾದಂತೆ ಪೊಲೀಸರನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಎರಡು ದಿನ ಕಾದುನೋಡುತ್ತೇವೆ. ಅಷ್ಟರಲ್ಲಿ ಮುಖ್ಯಮಂತ್ರಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹೋರಾಟಕ್ಕೆ ಇಳಿಯಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು