ದಸರಾ ಹಬ್ಬದ ಅಂಗವಾಗಿ ಶರಣ ಹರಳಯ್ಯನವರ ಗವಿಯಲ್ಲಿ ಅಕ್ಟೋಬರ್ 11ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪಂಡಿತಾರಾಧ್ಯ ಶಿವಾಚಾರ್ಯರು ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಸವತತ್ವ ಪ್ರಚಾರದಲ್ಲಿ ತೊಡಗಿರುವುದನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ ಎಂದು ಹರಳಯ್ಯ ಪೀಠಾಧ್ಯಕ್ಷೆ ಅಕ್ಕ ಗಂಗಾಂಬಿಕಾ ತಿಳಿಸಿದ್ದಾರೆ.