ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣರ ಬದುಕು ಎಲ್ಲರಿಗೂ ಪ್ರೇರಣೆ

ಶಿವಯೋಗಿ ಸಿದ್ದರಾಮೇಶ್ವರ ಮಠದಲ್ಲಿ ಅನುಭಾವ ಸಂಗಮ; ಸಿದ್ದೇಶ್ವರ ಸ್ವಾಮೀಜಿ
Last Updated 5 ಡಿಸೆಂಬರ್ 2021, 5:57 IST
ಅಕ್ಷರ ಗಾತ್ರ

ಭಾಲ್ಕಿ: ಬಸವಾದಿ ಶರಣರ ಬದುಕು ಮತ್ತು ಅವರ ಆದರ್ಶಗಳು ಪ್ರತಿಯೊಬ್ಬರಿಗೆ ಪ್ರೇರಣೆಯಾಗಿವೆ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಹೇಳಿದರು.

ತಾಲ್ಲೂಕಿನ ಗೋರಚಿಂಚೋಳಿ ಗ್ರಾಮದ ಶಿವಯೋಗಿ ಸಿದ್ದರಾಮೇಶ್ವರ ಮಠದಲ್ಲಿ ಆಯೋಜಿಸಿದ ಅನುಭಾವ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಬದುಕು ಅತ್ಯಂತ ಪವಿತ್ರವಾದದ್ದು. ವ್ಯಕ್ತಿಯ ಅಂತರಂಗ ಮತ್ತು ಬಹಿರಂಗ ಸ್ವಚ್ಛತೆ ಆದಾಗ ಕಲ್ಯಾಣ ರಾಜ್ಯ ನಿರ್ಮಾಣ ಆಗಲು ಸಾಧ್ಯವಾಗುತ್ತದೆ ಎಂದು ಅವರು ಸಲಹೆ ನೀಡಿದರು.

ಬಸವಾದಿ ಶರಣರ ಚಿಂತನೆ ಮತ್ತು ತತ್ವಗಳು ಮನುಕುಲದ ಕಲ್ಯಾಣಕ್ಕೆ ಪೂರಕವಾಗಿವೆ. ಪ್ರತಿಯೊಬ್ಬರೂ ಶರಣರ ಚರಿತ್ರೆಯನ್ನು ಅಧ್ಯಯನ ಮಾಡಿ, ಅವುಗಳ ಸಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾವನರಾಗಳಬೇಕು ಎಂದು ತಿಳಿಸಿದರು.

ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಮಹಾತ್ಮರು ಬಂದಾಗ ಸಮಯ ಇಲ್ಲ ಎಂದು ಹೇಳಿಬಾರದು. ಏಕೆಂದರೆ ಮಹಾತ್ಮರ ಆಗಮನವನ್ನು ಗುಡಿ ತೋರಣವ ಕಟ್ಟಿ ಸ್ವಾಗತಿಸುವುದು ನಮ್ಮ ಭಾರತೀಯ ಸಂಸ್ಕೃತಿಯ ಪರಂಪರೆ ಆಗಿದೆ. ನಮ್ಮ ಮನೆ ಮಹಾಮನೆ, ಗ್ರಾಮ ಕಲ್ಯಾಣ ಗ್ರಾಮವಾಗಲು ಸಿದ್ದೇಶ್ವರ ಶ್ರೀಗಳು ನೀಡುವ ಉಪದೇಶ ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಸಿದ್ದರಾಮೇಶ್ವರ ಮಠದ ಪೀಠಾಧಿಪತಿ ಸಿದ್ದರಾಮೇಶ್ವರ ಪಟ್ಟದ್ದೇವರು ಸಮ್ಮುಖ ವಹಿಸಿ ಮಾತನಾಡಿದರು. ಮಲಗುಂಡಿಯ ಬಸವಾನಂದ ಸ್ವಾಮೀಜಿ ಇದ್ದರು.

ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆಯ ಗುತ್ತೆದಾರ ಚನ್ನಬಸವ ಬಳತೆ ದಂಪತಿ ಅವರನ್ನು
ಸನ್ಮಾನಿಸಲಾಯಿತು.

ನಿರಂಜನ ಸ್ವಾಮೀಜಿ ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ವೀರಣ್ಣ ಕಾರಬಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT