ಶನಿವಾರ, ಜುಲೈ 2, 2022
25 °C

ಹೋರಾಟಗಾರರ ಜೀವನಗಾಥೆ ತಿಳಿಸಿ: ಶರಣು ಸಲಗರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ಇಲ್ಲಿ ಶನಿವಾರ ಗೋರಟಾ (ಬಿ)ದಲ್ಲಿ ಮೇ 28ರಂದು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

ಶಾಸಕ ಶರಣು ಸಲಗರ ಮಾತನಾಡಿ, `ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರ ಹೋರಾಟದ ಜೀವನಗಾಥೆ ಮತ್ತು ಚಳವಳಿಯ ಬಗ್ಗೆ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಯುವ ಜನಾಂಗದಲ್ಲಿ ದೇಶಾಭಿಮಾನ ಬೆಳೆಸುವುದಕ್ಕೂ ಪ್ರೇರಣೆ ನೀಡಬೇಕಾಗಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಹೋರಾಟಗಾರರನ್ನು ಸನ್ಮಾನಿಸಿ, ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದರು.

ಹುಲಸೂರ ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, `ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಪ್ರೇರಣಾದಾಯಕವಾಗಿ ಆಯೋಜಿಸಲಾಗುತ್ತದೆ. ನಾಲ್ಕು ಹಂತಗಳಲ್ಲಿ ವಿವಿಧ ಚಟಟುವಟಿಕೆಗಳು ನಡೆಯಲಿವೆ' ಎಂದು ತಿಳಿಸಿದರು.

ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಕವನ ವಾಚನ, ರಂಗೋಲಿ, ಚಿತ್ರಕಲೆ, ಭಾಷಣ ಸ್ಪರ್ಧೆ ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ಬಿಇಒ ಅಂಬಾದಾಸ ಜಮಾದಾರ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರವೀಂದ್ರನಾಥ, ಸಮಾಜ ಕಲ್ಯಾಣಾಧಿಕಾರಿ ಗಿರೀಶ ರಂಜೋಳಕರ್, ಶ್ರೀಶೈಲ್ ಕಾಚಾಪುರ, ಶರಣಪ್ಪ ಪಾಟೀಲ ಇತರರು ಇದ್ದರು.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.