ಶನಿವಾರ, ಮೇ 8, 2021
26 °C

ಸಿದ್ದರಾಮಯ್ಯಗೆ ಕುರಿ ಕಾಣಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ತಾಲ್ಲೂಕಿನ ಸಸ್ತಾಪುರದಲ್ಲಿ ಸೋಮವಾರ ನಡೆದ ಉಪ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಕುರಿ, ಟಗರು ಕಾಣಿಕೆಯಾಗಿ ನೀಡಿದರು. ಕಂಬಳಿ ಹೊದಿಸಿ
ಸನ್ಮಾನಿಸಿದರು.

ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಅವರನ್ನು ಬೆಂಬಲಿಗರು ಸನ್ಮಾನಿಸಿದರು. ತಮಟೆ, ಡೊಳ್ಳು ಬಾರಿಸುವ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಸಿದ್ದರಾಮಯ್ಯ ಹಾಗೂ ಇತರೆ ಮುಖಂಡರನ್ನು ವೇದಿಕೆಗೆ ಕರೆತರಲಾಯಿತು. ಅವರ ಮೇಲೆ ಪುಷ್ಪವೃಷ್ಟಿಗೈಯಲಾಯಿತು.

ಸಭೆಯಲ್ಲಿ ಮಾಜಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, `ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 371 (ಜೆ) ಜಾರಿಗೆ ತರುವ ಮೂಲಕ ಈ ಭಾಗದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪ್ರಯತ್ನಿಸಿದೆ. ಬಿಜೆಪಿಯವರು ವಿದೇಶದಲ್ಲಿನ ಕಪ್ಪು ಹಣ ತಂದು ಚುನಾವಣೆಯಾದ 100 ದಿನದೊಳಗೆ ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ತಲಾ ₹15 ಲಕ್ಷ ಪಾವತಿಸಲಾಗುತ್ತದೆ ಎಂದು ಸುಳ್ಳು ಹೇಳಿದರು. ಪ್ರಧಾನಿ ಮೋದಿಯವರು ಪ್ರತಿ ವರ್ಷ ₹2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿದರಾದರೂ ಇವರ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ’ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು