ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಣ್ಣ ಪ್ರತಿಮೆ ತೆರವು: ಪ್ರತಿಭಟನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ನೇತೃತ್ವ
Last Updated 25 ಆಗಸ್ಟ್ 2020, 3:48 IST
ಅಕ್ಷರ ಗಾತ್ರ

ಬೀದರ್: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾಗೂ ರಾಷ್ಟ್ರಧ್ವಜ ತೆಗೆದು ಹಾಕಿದ್ದನ್ನು ಖಂಡಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ಮುಂದಾಳತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.

ಸಂಗೊಳ್ಳಿ ರಾಯಣ್ಣ ಅಪ್ಪಟ ದೇಶಭಕ್ತರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದರು. ಬೆಳಗಾವಿ ಜಿಲ್ಲಾಡಳಿತ ಅವರ ಪ್ರತಿಮೆ ತೆರವುಗೊಳಿಸಿರುವುದು ಹಾಗೂ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಖಂಡನೀಯವಾಗಿದೆ ಎಂದು ಹೇಳಿದರು.

ಪೀರನವಾಡಿಯಲ್ಲಿ ತೆರವುಗೊಳಿಸಿದ ಸ್ಥಳದಲ್ಲೇ ರಾಯಣ್ಣ ಅವರ ಪ್ರತಿಮೆ ಮರು ಸ್ಥಾಪಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಚಿನ್ ಮಲ್ಕಾಪುರೆ, ಕನಕ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ರಾಕೇಶ ಚನ್ನಪ್ಪನೋರ ಕುರುಬಖೇಳಗಿ, ಭೀಮ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಅಮರೇಶ ಕುದರೆ, ಉಪಾಧ್ಯಕ್ಷ ರಜನಿಕಾಂತ ನಿಜಾಂಪುರೆ, ಭಾರತ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಮಲ್ಕಾಪುರೆ, ಕರ್ನಾಟಕ ಏಕೀಕರಣ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಇಮಾನುವೆಲ್ ಮಂದಕನಳ್ಳಿ, ಮಾರ್ಟಿನ್ ಮಾಸ್, ವಿಶಾಲ ಕುದರೆ, ರವಿ ಕೋಡಗೆ, ಶರಣು ಬಿರಾದಾರ, ಆಕಾಶ ಜ್ಞಾನಪ್ಪನೋರ, ಸಿದ್ದು ಗಾದಗಿ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT