ಬಸವಕಲ್ಯಾಣ: ‘ರಾಷ್ಟ್ರಪುರುಷರ ಆದರ್ಶ ಮೈಗೂಡಿಸಿಕೊಳ್ಳಬೇಕು. ಛತ್ರಪತಿ ಶಿವಾಜಿ ಮಹಾರಾಜ ಅವರಂತೆ ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು’ ಎಂದು ಶಾಸಕ ಶರಣು ಸಲಗರ ಹೇಳಿದರು.

ತಾಲ್ಲೂಕಿನ ಹತ್ಯಾಳ ಗ್ರಾಮದಲ್ಲಿ ಬುಧವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿವಾಜಿ ಅವರ ಧೈರ್ಯ, ಸಾಹಸ ಮೆಚ್ಚುವಂಥದ್ದು. ಅವರು ಪ್ರಜಾಸ್ನೇಹಿ ಆಡಳಿತ ನೀಡಿದ್ದರು. ಹಿಂದವೀ ಸ್ವರಾಜ್ಯ ಸ್ಥಾಪಿಸಿದರು’ ಎಂದರು.

ಹಾರಕೂಡ ಚನ್ನವೀರ ಶಿವಾಚಾರ್ಯರು ಮಾತನಾಡಿ, ‘ಸ್ವಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಎಲ್ಲರಲ್ಲಿ ಬರಬೇಕು. ಶಿವಾಜಿ ಮಹಾರಾಜರು ದೇಶದ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು’ ಎಂದರು.

ಕೃಷ್ಣಾ ಕಾಡಾ ನಿಗಮದ ಅಧ್ಯಕ್ಷ ಬಾಬು ಹೊನ್ನಾನಾಯಕ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ, ಪದ್ಮಾಕರ ಪಾಟೀಲ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾಜಕುಮಾರ ಶಿರಗಾಪುರ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಜ್ಞಾನೇಶ್ವರ ಮುಳೆ, ಸಿದ್ದು ಬಿರಾದಾರ, ತಾತೇರಾವ್ ಪಾಟೀಲ, ಶ್ರೀನಿವಾಸ ಪಾಟೀಲ, ವಿಕಾಸ ಸೂರ್ಯವಂಶಿ, ಓಂಪ್ರಕಾಶ ಪಾಟೀಲ, ಸದಾನಂದ ಪಾಟೀಲ, ಖಂಡುಜಿ ಡಾಯಫುಡೆ, ಶಿವಕುಮಾರ ಭುಜಂಗೆ, ಅಪ್ಪಾರಾವ್ ಮುಳೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.