ಮಂಗಳವಾರ, ಮೇ 17, 2022
23 °C

ಶಿವಸ್ವಾಮಿ ಚೀನಕೇರಾಗೆ ಪುಟ್ಟರಾಜ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘವು ಅಂಧ ಕಲಾವಿದರಿಗೆ ಕೊಡುವ ಪ್ರಸಕ್ತ ಸಾಲಿನ ಪುಟ್ಟರಾಜ ಪ್ರಶಸ್ತಿಗೆ
ಜಿಲ್ಲೆಯ ಹಿರಿಯ ಸಂಗೀತ ಕಲಾವಿದ ಶಿವಸ್ವಾಮಿ ಚೀನಕೇರಾ ಅವರನ್ನು ಆಯ್ಕೆ ಮಾಡಿದೆ.

ಹುಮನಾಬಾದ್ ತಾಲ್ಲೂಕಿನ ಚೀನಕೇರಾ ಗ್ರಾಮದ ಶಿವಸ್ವಾಮಿ ಅವರ ಮನೆಗೆ ಭೇಟಿ ನೀಡಿದ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ. ಕಲ್ಮಠ, ಚಂದ್ರಶೇಖರ ಹೆಬ್ಬಾಳೆ, ಡಾ. ಎಸ್.ಬಿ. ಬಿರಾದಾರ, ಬಾಬುರಾವ್ ಮಡಿವಾಳ, ಕಂಟೆಪ್ಪ ಗಂದಿಗುಡಿ ಹಾಗೂ ವೈಜಿನಾಥ ಸಜ್ಜನಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ ನೀಡಿದರು.

ಬೀದರ್‌ನ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಮಾರ್ಚ್ 12 ರಂದು ನಡೆಯಲಿರುವ ಪಂಡಿತ ಪುಟ್ಟರಾಜ ಗವಾಯಿ ಅವರ 76ನೇ ಪುಣ್ಯತಿಥಿ, ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ 10ನೇ ಪುಣ್ಯತಿಥಿ ಹಾಗೂ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ 18ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೊ. ಎಸ್.ವಿ. ಕಲ್ಮಠ ತಿಳಿಸಿದರು.

ಪ್ರಶಸ್ತಿಯು ₹5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.