371(ಜೆ) ಋಣ ತೀರಿಸಿ: ಮಲ್ಲಿಕಾರ್ಜುನ ಖರ್ಗೆ

7

371(ಜೆ) ಋಣ ತೀರಿಸಿ: ಮಲ್ಲಿಕಾರ್ಜುನ ಖರ್ಗೆ

Published:
Updated:

ಬೀದರ್: ‘ಸಂವಿಧಾನದ 371(ಜೆ) ಲಾಭ ಪಡೆದವರು ಬರುವ ಲೋಕಸಭೆ ಚುನಾವಣೆಯಲ್ಲಿ ಅದರ ಋಣ ತೀರಿಸಬೇಕು. ಹೈದರಾಬಾದ್ ಕರ್ನಾಟಕ ಭಾಗದ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

‘371(ಜೆ) ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಾಂಗ್ರೆಸ್ ಕೊಡುಗೆ ಆಗಿದೆ. ಕಾಯ್ದೆಯು ಈ ಭಾಗದ ಅಭಿವೃದ್ಧಿಗೆ ನೆರವಾಗಿದೆ’ ಎಂದು ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜನಧ್ವನಿ ಸಮಾವೇಶದಲ್ಲಿ ತಿಳಿಸಿದರು.

‘ಕಾಂಗ್ರೆಸ್ ದೇಶಕ್ಕಾಗಿ ಏನೂ ಮಾಡಿಲ್ಲ ಎಂದು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದೇ ಕಾಂಗ್ರೆಸ್‌ನಿಂದ. ಬಿಜೆಪಿಯವರೂ ಇದರ ಲಾಭ ಪಡೆದಿದ್ದಾರೆ. ಮೋದಿ ಪ್ರಧಾನಿ ಆಗಿದ್ದಾರೆ. ಈ ಮಾತು ಮೋದಿ ಅವರಿಗೂ ಹೇಳಿದ್ದೇನೆ’ ಎಂದರು.

‘ಬರುವ ಲೋಕಸಭೆ ಚುನಾವಣೆಯು ದೇಶದ ಪಾಲಿಗೆ ಮಹತ್ವದ್ದಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತ ತತ್ವಗಳ ಉಳಿವು ಹಾಗೂ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಕಾಂಗ್ರೆಸ್‌ನ್ನು ಗೆಲ್ಲಿಸಬೇಕಿದೆ’ ಎಂದು ತಿಳಿಸಿದರು.
‘ಕಾಂಗ್ರೆಸ್‌ ಕಾರ್ಯಕರ್ತರು ಒಗಟ್ಟಾಗಿ ಸಂಘಟನೆ ಬಲಪಡಿಸಬೇಕು. ಈ ಮೂಲಕ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರ ಕೈ ಬಲಪಡಿಸಬೇಕು’ ಎಂದು ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !