ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ–ಖೂಬಾ

Published 17 ಆಗಸ್ಟ್ 2024, 10:58 IST
Last Updated 17 ಆಗಸ್ಟ್ 2024, 10:58 IST
ಅಕ್ಷರ ಗಾತ್ರ

ಬೀದರ್‌: ‘ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಿಜವಾಗಲೂ ಸಂವಿಧಾನ ಹಾಗೂ ನ್ಯಾಯಾಂಗದ ಮೇಲೆ ಗೌರವವಿದ್ದರೆ ಅವರ ಹುದ್ದೆಗೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು’ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ಇಲ್ಲವಾದಲ್ಲಿ ಈ ಘಟನೆ ಸಿದ್ದರಾಮಯ್ಯನವರ 40 ವರ್ಷಗಳ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆಯಾಗಲಿದೆ. ಸಿದ್ದರಾಮಯ್ಯನವರು ನಾನೊಬ್ಬ ಸಮಾಜವಾದಿ ಎಂದು ಹೇಳಿಕೊಂಡು ದಲಿತರು, ಹಿಂದುಳಿದವರನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ದಲಿತರ ಜಮೀನು ಹೊಡೆದು, ಅದನ್ನು ಮುಡಾಗೆ ಕೊಟ್ಟು, ಬೆಲೆ ಬಾಳುವ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದ ನಂತರವೇ ರಾಜ್ಯಪಾಲರು ಕಾನೂನು ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾನೂನು ಪ್ರಕ್ರಿಯೆ ಮುಗಿಯುವವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯುವುದು ಸೂಕ್ತವಲ್ಲ. ಇದು ಸಂವಿಧಾನಕ್ಕೆ ಮಾಡುವ ಅಪಮಾನ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಬಗ್ಗೆ ಕಾಂಗ್ರೆಸ್‌ ಸಚಿವರುಗಳು ಮನಬಂದಂತೆ ಮಾತನಾಡುವುದು ಸರಿಯಲ್ಲ. ಹಿಂದೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಿದ್ದಾಗ ಆ ಹುದ್ದೆಗೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದರು. ಸಿದ್ದರಾಮಯ್ಯನವರು ಅದೇ ದಾರಿಯಲ್ಲಿ ನಡೆಯಬೇಕು. ಭಂಡತನ ತೋರಿ ಕೆಟ್ಟ ಪದ್ದತಿಗೆ ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೂ ವ್ಯವಸ್ಥೆ ಸರಿ ಇಲ್ಲ. ಮುಖ್ಯಮಂತ್ರಿ, ಮಂತ್ರಿಗಳು ನೇರವಾಗಿ ಭ್ರಷ್ಟಾಚಾರದಲ್ಲಿ ಸಿಕ್ಕಿ ಬೀಳುತ್ತಿದ್ದಾರೆ. ಹಗರಣಗಳಿಂದ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT