ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಮನಾಬಾದ್:‌ ಇದು ನನ್ನ ಕೊನೆಯ ಚುನಾವಣೆ: ಸಿದ್ದರಾಮಯ್ಯ

Last Updated 5 ಫೆಬ್ರುವರಿ 2023, 7:43 IST
ಅಕ್ಷರ ಗಾತ್ರ

ಹುಮನಾಬಾದ್:‌ ಬರುವ ವಿಧಾನ ಚುನಾವಣೆಯೇ ನನ್ನ ಕೊನೆಯ ಚುನಾವಣೆ.‌ ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ತೇರು ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.‌ ಬರುವ ಚುನಾವಣೆಯಲ್ಲಿ ರಾಜಶೇಖರ ಪಾಟೀಲ ಅವರು 50 ಸಾವಿರ ಮತಗಳಿಂದ ಗೆಲ್ಲಲಿದ್ದಾರೆ ಎಂದರು.

ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ‘ಸಿದ್ದರಾಮಯ್ಯ ಅವರು ಹಿಂದುಳಿದ, ಬಡವರ ಪರವಾಗಿ ಇದ್ದಾರೆ. ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಇಡೀ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ಮತಗಳಿಂದ ಹುಮನಾಬಾದ್ ವಿಧಾನ ಸಭಾ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಸರ್ಕಾರ ಚುನಾವಣೆ ಮುನ್ನ ಬಿಎಸ್‌ಎಸ್‌ಕೆ ಕಾರ್ಖಾನೆ ಪುನಶ್ಚೇತನ ಮಾಡುತ್ತೇವೆ ಎಂದಿದ್ದರು. ಆದರೆ ಕಾರ್ಖಾನೆ ಪ್ರಾರಂಭ ಮಾಡಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕಾರ್ಖಾನೆ ಪುನ ಪ್ರಾರಂಭ ಮಾಡಬೇಕೆಂದು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.

ಶಾಸಕ ಎಂ.ಬಿ.ಪಾಟೀಲ ಮಾತನಾಡಿ, ದೇಶದ ಸರ್ವತೋಮುಖಿ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಎಸಿ,‌ಎಸ್ ಟಿ, ಮೈನಾರಿಟಿ ಸಮುದಾಯಗಳ ಅಭಿವೃದ್ಧಿಗೆ ಒತ್ತು ನೀಡಿದ್ದರು ಎಂದರು.

ಶಾಸಕ ಜಮೀರ್ ಅಹ್ಮದ್ ಖಾನ್ ಮಾತನಾಡಿದರು.

ಶಾಸಕ ಈಶ್ವರ ಖಂಡ್ರೆ, ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಅರವಿಂದ್ ಅರಳಿ, ಮಾಜಿ ಶಾಸಕ ಅಶೋಕ್ ಖೇಣಿ, ಬಸವರಾಜ ಪಾಟೀಲ ರಾಯಗಡ್ಡ, ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಧನರಾಜ್ ತಾಳಂಪಳ್ಳಿ, ಗೀತಾ ಚಿದ್ರಿ, ಮೀನಾಕ್ಷಿ ಸಂಗ್ರಾಮ, ಬಸವರಾಜ ಜಾಬಶೆಟ್ಟಿ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ವೀರಣ್ಣ ಪಾಟೀಲ, ಪ್ರಕಾಶ್ ಪಾಟೀಲ, ದತ್ತು ಕುಮಾರ್ ಚಿದ್ರಿ ಇದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್ ಮಿಯ್ಯಾ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT