ಮಂಗಳವಾರ, ಜನವರಿ 25, 2022
28 °C

ಸಿದ್ಧರಾಮೇಶ್ವರ ಜಾತ್ರೆ: ಶ್ರದ್ಧೆಯ ಗಂಗಾ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬರಗಾಲದ ವೇಳೆ ಸಿದ್ಧರಾಮೇಶ್ವರರು ಜನರ ಕುಡಿಯುವ ನೀರಿನ ಬವಣೆ ತಪ್ಪಿಸಿದ್ದರು ಎಂದು ಗುರು ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ನುಡಿದರು.

ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ಗುರು ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಸಿದ್ಧರಾಮೇಶ್ವರ ಜಾತ್ರೆ ಪ್ರಯುಕ್ತ ಗಂಗಾ ಪೂಜೆ ನೆರವೇರಿಸಿ ಅವರು ಮಾತನಾಡಿದರು.

1972 ರಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿತ್ತು. ಜನ ಹನಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜನರ ಸಂಕಷ್ಟಕ್ಕೆ ಮರುಗಿದ ಸಿದ್ಧರಾಮೇಶ್ವರರು ಸ್ವತಃ ಬಾವಿ ತೋಡಿದ್ದರು ಎಂದು ತಿಳಿಸಿದರು.

ಅವರು ತೋಡಿದ್ದ 19 ಅಡಿ ಆಳದ ಬಾವಿ ಜನರ ಬಾಯಾರಿಕೆ ನೀಗಿಸಿತ್ತು. ಈವರೆಗೆ ಒಮ್ಮೆಯೂ ಬತ್ತಿಲ್ಲ ಎಂದು ಹೇಳಿದರು.

ಸಿದ್ಧರಾಮೇಶ್ವರರು ಭಕ್ತರ ಉದ್ಧಾರಕ್ಕೆ ಬದುಕು ಸವೆಸಿದ್ದರು. ಅವರ ಸಮಾಜೋಧಾರ್ಮಿಕ ಕಾರ್ಯಗಳ ಹೆಚ್ಚು ಹೆಚ್ಚು ಪ್ರಚಾರ ಆಗಬೇಕಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಅವರು ಬಾವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಸೇರಿದಂತೆ ಗ್ರಾಮದ ನೂರಾರು ಜನ ಶ್ರದ್ಧೆ, ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನಂತರ ನಡೆದ ಧರ್ಮಸಭೆಯಲ್ಲಿ ಶಿರೂರಿನ ಜಯಸಿದ್ಧೇಶ್ವರ ಸ್ವಾಮೀಜಿ ‘ಜೀವನ ದರ್ಶನ' ಕುರಿತು ಪ್ರವಚನ
ನೀಡಿದರು. ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು.

ಠಾಣಾಕುಶನೂರದ ಸೂರ್ಯಕಾಂತ ಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ, ಬೀರಿ(ಬಿ) ಗ್ರಾಮದ ಬಾಬುರಾವ್ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.