ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ‘ಸಿದ್ಧಲೋಕ’ ಜನಾರ್ಪಣೆ

Last Updated 13 ಸೆಪ್ಟೆಂಬರ್ 2022, 19:30 IST
ಅಕ್ಷರ ಗಾತ್ರ

ಬೀದರ್: ನಿವೃತ್ತ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೂರಾ ಅವರ ಅಭಿನಂದನಾ ಗ್ರಂಥ ‘ಸಿದ್ಧಲೋಕ’ದ ಜನಾರ್ಪಣೆ ಸಮಾರಂಭ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಬುಧವಾರ(ಸೆ. 14) ಸಂಜೆ 5.30ಕ್ಕೆ ನಡೆಯಲಿದೆ.
ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ. ವೀರಣ್ಣ ಸಮಾರಂಭ ಉದ್ಘಾಟಿಸುವರು. ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಬಿ.ಬಿ. ಪೂಜಾರ ಗ್ರಂಥ ಬಿಡುಗಡೆ ಮಾಡುವರು.

ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಸಿದ್ಧಾರೂಢ ಮಠದ ಡಾ. ಶಿವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸುವರು. ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ದೇಗಲಮಡಿ ಆಶ್ರಮದ ಬಸವಲಿಂಗ ಅವಧೂತರು ನೇತೃತ್ವ, ಖಾನಾಪುರದ ಆನಂದ ಆಶ್ರಮದ ಜಗದೇಶ್ವರಿ ಮಾತೆ ಸಮ್ಮುಖ ವಹಿಸುವರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಸಿದ್ಧಾರೆಡ್ಡಿ ನಾಗೂರಾ ಅಭಿನಂದನೆ ಸಮಿತಿ ವತಿಯಿಂದ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT