ಬೀದರ್: ಕೇಂದ್ರ ಸಂಸ್ಕೃತಿ ಸಚಿವಾಲಯ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 26 ರಂದು ಹುಮನಾಬಾದ್‌ನಲ್ಲಿ ನಡೆಯಲಿರುವ ಜಿಲ್ಲಾ ಜಾನಪದ ಕಲಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೋಂದಳಿ ಜನಪದ ಕಲಾವಿದ ಸಿದ್ರಾಮ ದಾದಾರಾವ್ ವಾಘ್ಮಾರೆ ಆಯ್ಕೆಯಾಗಿದ್ದಾರೆ.
ಸಿದ್ರಾಮ ವಾಘ್ಮಾರೆ ಅವರು ರಾಜ್ಯ ಮಟ್ಟದ ಗೋಂದಳಿ ಸಮಾವೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಾನಪದ ಅಕಾಡೆಮಿ, ಅಖಿಲ ಭಾರತ 72 ಕನ್ನಡ ಸಾಹಿತ್ಯ ಸಮ್ಮೇಳನ, ಬೀದರ್ ಉತ್ಸವದಲ್ಲಿ ಭಾಗವಹಿಸಿ ಗೋಂದಳಿ ಜನಪದ ಕಲೆ ಪ್ರದರ್ಶಿಸಿದ್ದಾರೆ.
ಜಿಲ್ಲಾ ಮಟ್ಟದ ರಾಜ್ಯೋತ್ಸವ ಗೌರವ, ಜಾನಪದ ಜಿಲ್ಲಾ ಪ್ರಶಸ್ತಿ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳ ಪ್ರಶಸ್ತಿಗಳನ್ನು ಪಡೆದಿದ್ದಾರೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.