ಗುರುವಾರ , ಜನವರಿ 28, 2021
18 °C

ಕಾಂಗ್ರೆಸ್‌ ಕಚೇರಿ ಕಟ್ಟಲು ಬೆಳ್ಳಿ ಖಡ್ಗ ಹರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಶಿವಶರಣ ಬಿರಾದಾರ ನೀಡಿರುವ ಬೆಳ್ಳಿ ಖಡ್ಗವನ್ನು ಹರಾಜು ಹಾಕಿ ಅದರಿಂದ ಬಂದ ಹಣವನ್ನು ತಾಲ್ಲೂಕಿನಲ್ಲಿ ಪಕ್ಷದ ಕಚೇರಿ ಕಟ್ಟಲು ಬಳಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು. ‘ಪಕ್ಷದ ಕಚೇರಿಯೇ ನಮ್ಮ ದೇವಸ್ಥಾನ. ಅದನ್ನು ಮೊದಲು ನಿರ್ಮಿಸಿಕೊಳ್ಳಬೇಕಿದೆ’ ಎಂದು ತಿಳಿಸಿದರು.

‘ಪಕ್ಷವೇ ನಮ್ಮ ಧರ್ಮ, ಕಾಂಗ್ರೆಸ್ ಧ್ವಜವೇ ನಮ್ಮ ಧರ್ಮ ಧ್ವಜ. ಈ ಧರ್ಮ ಧ್ವಜದ ಅಡಿಯಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು