ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಜಯಂತಿ ಸರಳವಾಗಿ ಆಚರಿಸಿ

ಸಾರ್ವಜನಿಕರಲ್ಲಿ ಬಸವ ಜಯಂತಿ ಉತ್ಸವ ಸಮಿತಿ ಮನವಿ
Last Updated 14 ಮೇ 2021, 7:22 IST
ಅಕ್ಷರ ಗಾತ್ರ

ಬೀದರ್: ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲೇ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಸವ ಜಯಂತಿಯನ್ನು ಶ್ರದ್ಧೆ, ಭಕ್ತಿಯಿಂದ ಸರಳವಾಗಿ ಆಚರಿಸಬೇಕು ಎಂದು ಬಸವ ಜಯಂತಿ ಉತ್ಸವ ಸಮಿತಿ ಮನವಿ ಮಾಡಿದೆ.

ಲಿಂಗಾಯತ ಸಮಾಜದ ಹಿರಿಯ ಮುಖಂಡ ಶಿವಶರಣಪ್ಪ ವಾಲಿ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ಈಗಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಜಯಂತಿ ಸಾಮೂಹಿಕವಾಗಿ ಆಚರಿಸದೆ, ಮನೆಗಳಲ್ಲಿ ರಂಗೋಲಿ ಹಾಕಿ, ಮಾಳಿಗೆ ಮೇಲೆ ಬಸವ ಧ್ವಜ ಹಾರಿಸಿ, ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ, ವಚನ ಪಠಣದೊಂದಿಗೆ ಆಚರಿಸಬೇಕು ಎಂದು ಕೋರಿದರು.

ಕೋವಿಡ್‌ನಿಂದ ಅನೇಕರು ಸಂಕಷ್ಟಕ್ಕೀಡಾಗಿದ್ದಾರೆ. ಅಂಥವರಿಗೆ ಪ್ರಸಾದ, ಬಟ್ಟೆ, ದವಸ ಧಾನ್ಯಗಳನ್ನು ವಿತರಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಸಲಹೆ ಮಾಡಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ರಜನೀಶ ವಾಲಿ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಶಕುಂತಲಾ ವಾಲಿ, ಯುವ ಮುಖಂಡರಾದ ದೀಪಕ ವಾಲಿ, ಆನಂದ ದೇವಪ್ಪ, ಸುರೇಶ ಚನಶೆಟ್ಟಿ, ಆದೀಶ ವಾಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT