ಶನಿವಾರ, ಏಪ್ರಿಲ್ 1, 2023
23 °C

ಮಳೆಗೆ ಕುಸಿದು ಬಿದ್ದ ಸಿರ್ಸಿ ಔರಾದ್ ಸೇತುವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಮಳೆಯಿಂದಾಗಿ ಬೀದರ್ ತಾಲ್ಲೂಕಿನ ಸಿರ್ಸಿ ಔರಾದ್- ಬಾವಗಿ ರಸ್ತೆಯಲ್ಲಿ ಇರುವ ಸೇತುವೆ ಕುಸಿದು ಬಿದ್ದಿದೆ.

ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ಅವರು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಆದಷ್ಟು ಬೇಗ ಸೇತುವೆ ದುರಸ್ತಿಪಡಿಸಬೇಕು. ಅಲ್ಲಿಯವರೆಗೆ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಲಿಂಗರಾಜ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಖಂಡ್ರೆ, ಕಿರಿಯ ಎಂಜಿನಿಯರ್ ಕುಪೇಂದ್ರ, ರಾಜಶೇಖರ, ಮುಖಂಡರಾದ ರವಿ, ಧೂಳಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.