ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರುದ್ಯೋಗಿಗಳಿಗೆ ಕೌಶಲ ತರಬೇತಿ: ಸಂಸತ್‍ನಲ್ಲಿ ಖೂಬಾ ಒತ್ತಾಯ

Last Updated 22 ಮಾರ್ಚ್ 2021, 15:18 IST
ಅಕ್ಷರ ಗಾತ್ರ

ಬೀದರ್: ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಡುವ ದಿಸೆಯಲ್ಲಿ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ಭಗವಂತ ಖೂಬಾ ಒತ್ತಾಯಿಸಿದರು.

ನವದೆಹಲಿಯಲ್ಲಿ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಹಾಗೂ ಕೋವಿಡ್ ಸಂದರ್ಭದಲ್ಲಿ ಸ್ವಗ್ರಾಮಕ್ಕೆ ಮರಳಿ ನಿರುದ್ಯೋಗಿ ಆಗಿರುವ ಯುವಕರಿಗೆ ಕೌಶಲ ತರಬೇತಿ ಕೊಡಬೇಕು. ತರಬೇತಿ ಕೇಂದ್ರಗಳಿಗೆ ಸೌಕರ್ಯ ಒದಗಿಸಬೇಕು ಎಂದು ಬೇಡಿಕೆ ಮಂಡಿಸಿದರು.

ಕೇಂದ್ರ ಸರ್ಕಾರವು ನಿರುದ್ಯೋಗ ಸಮಸ್ಯೆ ನಿವಾರಿಸಲು ಹಾಗೂ ಸ್ವಯಂ ಉದ್ಯೋಗಕ್ಕೆ ನೆರವಾಗಲು ಅನೇಕ ರೀತಿಯ ತರಬೇತಿಗಳನ್ನು ಕೊಡುತ್ತಿದೆ. ಯುವಕರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು ಎಂದು ಕೋರಿದರು.

ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಡಾ. ಮಹೇಂದ್ರನಾಥ ಪಾಂಡೆ ಅವರು ತರಬೇತಿ ಕೇಂದ್ರಗಳಿಗೆ ಸೌಕರ್ಯ ಕಲ್ಪಿಸಿ, ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕೌಶಲ ತರಬೇತಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT