ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಬದಲಾವಣೆ: ಯುವಕರ ಪಾತ್ರ ಮುಖ್ಯ- ಓಂಪ್ರಕಾಶ ರೊಟ್ಟೆ ಹೇಳಿಕೆ

ಉಪನ್ಯಾಸ ಕಾರ್ಯಕ್ರಮದಲ್ಲಿ ಓಂಪ್ರಕಾಶ ರೊಟ್ಟೆ ಹೇಳಿಕೆ
Last Updated 20 ಸೆಪ್ಟೆಂಬರ್ 2021, 15:26 IST
ಅಕ್ಷರ ಗಾತ್ರ

ಬೀದರ್: ಸಾಮಾಜಿಕ ಬದಲಾವಣೆಯಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ನುಡಿದರು.

ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ನಗರದ ಕರುನಾಡು ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಿದ್ದ ಸಮಾಜ ಸುಧಾರಣೆಯಲ್ಲಿ ಯುವಕರ ಪಾತ್ರ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಕರೇ ದೇಶದ ನಿಜವಾದ ಶಕ್ತಿ ಆಗಿದ್ದಾರೆ. ಶಾಲಾ, ಕಾಲೇಜು ಮಟ್ಟದಲ್ಲಿಯೇ ಅವರಿಗೆ ಸಾಮಾಜಿಕ ಚಟುವಟಿಕೆಗಳ ಮಾರ್ಗದರ್ಶನ ನೀಡುವ ಅಗತ್ಯ ಇದೆ ಎಂದು ಹೇಳಿದರು.

ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳು ಯುವಕರಿಗೆ ಆದರ್ಶರಾಗಬೇಕು ಎಂದು ಶಿಕ್ಷಕ ಅರವಿಂದ ಹುಡಗಿಕರ್ ಅಭಿಪ್ರಾಯಪಟ್ಟರು.

ವೇದಿಕೆಯು ಗಡಿ ಭಾಗದಲ್ಲಿ ಸಾಹಿತ್ಯ, ಸಂಸ್ಕøತಿಯ ಬೆಳವಣಿಗೆಗೆ ಹತ್ತು ಹಲವು ರಚನಾತ್ಮಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಬರುವ ದಿನಗಳಲ್ಲಿ ಯುವಕರಿಗೆ ಸಾಹಿತ್ಯ ಕಮ್ಮಟ, ಸಮ್ಮೇಳನ ಆಯೋಜಿಸುವ ಯೋಜನೆ ಇದೆ ಎಂದು ಅಧ್ಯಕ್ಷತೆ ವಹಿಸಿದ್ದ ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಗೌರವಾಧ್ಯಕ್ಷ ಸಂಜೀವಕುಮಾರ ಅತಿವಾಳೆ ಹೇಳಿದರು.

ಸರ್ಕಾರಿ ಪದವಿಪೂರ್ವ ಕಾಲೇಜು ಉಪ ಪ್ರಾಚಾರ್ಯೆ ಜಗದೇವಿ ಭೋಸ್ಲೆ, ಬೌದ್ಧ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ ಬಿರಾದಾರ, ವೇದಿಕೆಯ ಗೌರವ ಕಾರ್ಯದರ್ಶಿ ರವೀಂದ್ರ ಲಂಜವಾಡಕರ್ ಮಾತನಾಡಿದರು.


ವೇದಿಕೆ ಅಧ್ಯಕ್ಷ ಶಾಮರಾವ್ ನೆಲವಾಡೆ ಸ್ವಾಗತಿಸಿದರು. ಸೃಜನ್ಯ ಅತಿವಾಳೆ ನಿರೂಪಿಸಿದರು. ಬಸವರಾಜ ನೌಬಾದೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT