ಮಣ್ಣು ಸಂರಕ್ಷಣೆ ತಾಂತ್ರಿಕತೆ ತರಬೇತಿ ಇಂದು

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಬಳಿಯ ಕೃಷಿ ವಿಜ್ಞಾನ ಕೇಂದ್ರವು ಕೆ.ವಿ.ಕೆ ಕೃಷಿ ಪಾಠ ಶಾಲೆ ಸರಣಿಯಲ್ಲಿ ಶನಿವಾರ (ಜು.3) ಬೆಳಿಗ್ಗೆ 11ಕ್ಕೆ ಮಣ್ಣು ಮತ್ತು ನೀರು ಸಂರಕ್ಷಣೆ ತಾಂತ್ರಿಕತೆ ಹಾಗೂ ಕೊಳವೆಬಾವಿ ರೀಚಾರ್ಜ್ ಕುರಿತು ರೈತರಿಗೆ ಆನ್‍ಲೈನ್‍ನಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ರಾಜಕುಮಾರ ಹಳಿದೊಡ್ಡಿ ಮಾರ್ಗದರ್ಶನ ಮಾಡಲಿದ್ದಾರೆ.
ಗೂಗಲ್ ಮೀಟ್ ಲಿಂಕ್ meet.google.com/eex-yaab-tgr ಬಳಸಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು. ಜಿಲ್ಲೆಯ ರೈತರು ತರಬೇತಿಯ ಪ್ರಯೋಜನ ಪಡೆಯಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.