ಶನಿವಾರ, ಫೆಬ್ರವರಿ 4, 2023
18 °C

26ಕ್ಕೆ ಶೋಷಿತರ ಐಕ್ಯತಾ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: 72ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೀಯ ಭಾವೈಕ್ಯತೆ ಮತ್ತು ಭ್ರಾತೃತ್ವ ವೇದಿಕೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜ. 26 ರಂದು ಸಂಜೆ 4ಕ್ಕೆ ಶೋಷಿತರ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ.

ವೇದಿಕೆಯ ಅಧ್ಯಕ್ಷ ಉಮೇಶಕುಮಾರ ಸ್ವಾರಳ್ಳಿಕರ್ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಮಾಹಿತಿ ನೀಡಿದರು.

ಆಣದೂರಿನ ವೈಶಾಲಿ ನಗರದ ಭಂತೆ ಸಂಘರಖ್ಖಿತ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸುವರು. ಸಂಸದ ಅಸದೊದ್ದಿನ್ ಓವೈಸಿ ಉದ್ಘಾಟಿಸುವರು. ಬೆಳಗಾವಿಯ ಶರಣಬಸವ ದೇವರು ಉಪನ್ಯಾಸ ನೀಡುವರು.

ಮಹಾರಾಷ್ಟ್ರದ ಸಾಂಗ್ಲಿಯ ವಸಂತ ಹಂಕಾರೆ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಈಚಿನ ದಿನಗಳಲ್ಲಿ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ, ಅನ್ಯಾಯ ಹಾಗೂ ಸಂವಿಧಾನ ವಿರೋಧಿ ಚಟುವಟಿಕೆಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ವೇದಿಕೆಯ ಗೌರವಾಧ್ಯಕ್ಷ ಸೈಯದ್ ವಹಿದ್ ಲಖನ್, ಕಾರ್ಯಾಧ್ಯಕ್ಷ ಅಭಿ ಕಾಳೆ, ಪ್ರಧಾನ ಕಾರ್ಯದರ್ಶಿ ಸಂದೀಪ ಕಾಂಟೆ, ಮುಖಂಡರಾದ ರಾಜಕುಮಾರ ಮೂಲಭಾರತಿ, ರವಿಕುಮಾರ ವಾಘಮಾರೆ, ಚಂದ್ರಕಾಂತ ನಿರಾಟೆ, ಓಂಪ್ರಕಾಶ ಭಾವಿಕಟ್ಟಿ, ನರಸಿಂಗ್ ಸಾಮ್ರಾಟ್, ಮಲ್ಲಿಕಾರ್ಜುನ ಚಿಟ್ಟಾ, ಖಂಡಪ್ಪ ಪಾತರಪಳ್ಳಿ, ರಾಜಕುಮಾರ ಸೋನಿ, ಸಂತೋಷ ಏಣಕೂರ, ಪ್ರಕಾಶ ಬಲಾಂಡೆ, ಕಲ್ಲಪ್ಪ ಬಂದಗೆ, ಸಿದ್ಧಾರ್ಥ ಲಾಮಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು