ಬರಲಿದೆ ಕಟ್ಟಡ ಸಾಮಗ್ರಿಗಳ ಮಾಹಿತಿ ನೀಡುವ ಆ್ಯಪ್: ಗಣಿ ಮತ್ತು ಭೂ ವಿಜ್ಞಾನ ಸಚಿವ

7

ಬರಲಿದೆ ಕಟ್ಟಡ ಸಾಮಗ್ರಿಗಳ ಮಾಹಿತಿ ನೀಡುವ ಆ್ಯಪ್: ಗಣಿ ಮತ್ತು ಭೂ ವಿಜ್ಞಾನ ಸಚಿವ

Published:
Updated:
Deccan Herald

ಬೀದರ್: ‘ಕಟ್ಟಡ ಸಾಮಗ್ರಿಗಳು ಒಂದೇ ಸ್ಥಳದಲ್ಲಿ ದೊರೆಯುವಂತೆ ಮಾಡಿ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಆ್ಯಪ್‌ ಆನ್ನು ಶೀಘ್ರ ಬಿಡುಗಡೆ ಮಾಡಲಾಗುವುದು’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ತಿಳಿಸಿದರು.

‘ಆ್ಯಪ್‌ ಮೂಲಕ ಮಾಹಿತಿ ಒದಗಿಸಿದರೆ ಕಟ್ಟಡ ನಿರ್ಮಾಣ ಮಾಡುವವರಿಗೆ ಅನುಕೂಲವಾಗಲಿದೆ. ಅಕ್ರಮ ವ್ಯವಹಾರಗಳಿಗೂ ಕಡಿವಾಣ ಹಾಕಲು ಸಾಧ್ಯವಾಗಲಿದೆ’ ಎಂದು ನಗರದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

‘ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ’ ಎಂದು ತಿಳಿಸಿದರು.

‘ಆಗಸ್ಟ್ 8ರಂದು ಅಧಿಕಾರಿಗಳ ತಂಡ ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು ರಾಜಸ್ಥಾನ ಹಾಗೂ ಗುಜರಾತ್‌ಗೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ನಿಯಂತ್ರಣ ಸೇರಿದಂತೆ ಪ್ರಮುಖ ಅಂಶಗಳ ಮಾಹಿತಿ ಸಂಗ್ರಸಿಕೊಂಡು ಬರಲಿದೆ. ಈ ತಂಡದ ವರದಿಯನ್ನು ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !