ಸೋಮವಾರ, ಜನವರಿ 17, 2022
20 °C

ಭೂಮಿಯಿಂದ ವಿಚಿತ್ರ ಶಬ್ದ: ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವಾಡ: ಬೀದರ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭೂಮಿಯಿಂದ ಕೇಳಿಸಿದ ವಿಚಿತ್ರ ಶಬ್ದವು ಜನರಲ್ಲಿ ಆತಂಕ ಉಂಟು ಮಾಡಿದೆ.

ಸಿರ್ಸಿ(ಎ), ಔರಾದ್(ಎಸ್), ರಂಜೋಳಖೇಣಿ ಹಾಗೂ ಕಾಶೆಂಪುರ(ಸಿ) ಗ್ರಾಮಗಳಲ್ಲಿ ಸೋಮವಾರ ಮಧ್ಯಾಹ್ನ 1 ರ ಸುಮಾರಿಗೆ ಭೂಮಿಯ ಒಳಗಿನಿಂದ ಜೋರಾದ ಶಬ್ದ ಕೇಳಿಸಿದೆ.

ಗ್ರಾಮಸ್ಥರ ಮಾಹಿತಿ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಮೇಲಧಿಕಾರಿಗಳಿಗೂ ಮಾಹಿತಿ ಮುಟ್ಟಿಸಿದ್ದಾರೆ. ಗ್ರಾಮಗಳಲ್ಲಿ ಡಂಗೂರ ಸಾರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.