ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘ಪ್ರತಿ ಕ್ವಿಂಟಲ್ ಉದ್ದು ₹7,400, ಸೋಯಾಬೀನ್ ಪ್ರತಿ ಕ್ವಿಂಟಲ್ ₹4,892 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಖರೀದಿಸಲಾಗುತ್ತದೆ. ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಿಂದ ನಾಫೆಡ್ ಸಂಸ್ಥೆಯನ್ನು ಖರೀದಿ ಕೇಂದ್ರವಾಗಿ ನೇಮಿಸಿ ಆದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.