ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ- ಅವಿನಾಶ ಪ್ರಥಮ, ಅನಿತಾ, ಸುನೀತಾ ದ್ವಿತೀಯ

Last Updated 27 ಅಕ್ಟೋಬರ್ 2021, 15:20 IST
ಅಕ್ಷರ ಗಾತ್ರ

ಬೀದರ್: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ‌ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯಲ್ಲಿ ಐವರು ಬಹುಮಾನ ಗೆದ್ದಿದ್ದಾರೆ.

ಅವಿನಾಶ (ಪ್ರಥಮ), ಅನಿತಾ, ಸುನೀತಾ ಬಿಕ್ಲೆ (ದ್ವಿತೀಯ) ರೇಣುಕಾ ಎಂ ಹಾಗೂ ಲಾವಣ್ಯ (ತೃತೀಯ) ಬಹುಮಾನ ಪಡೆದುಕೊಂಡರು.ಅನ್ಯ ಭಾಷೆ ಪದಗಳನ್ನು ಬಳಸದೆ, ಸಂಪೂರ್ಣ ಕನ್ನಡದಲ್ಲೇ ಕನ್ನಡ ನಾಡು, ನುಡಿ, ನೆಲ, ಜಲ ಮತ್ತು ಸಂಸ್ಕೃತಿಯ ಹಿರಿಮೆ ಕುರಿತು ನಾಲ್ಕರಿಂದ ಐದು ನಿಮಿಷ ನಿರರ್ಗಳವಾಗಿ ಮಾತನಾಡಿ ಗಮನ ಸೆಳೆದರು. ಒಟ್ಟು 16 ಜನ ಸ್ಪರ್ಧಿಗಳು ಭಾಗವಹಿಸಿದ್ದರು.

ವಿಜೇತರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಆಗಬಹುಮಾನ ರೂಪದಲ್ಲಿ ಪುಸ್ತಕ ಹಾಗೂ ಪ್ರಮಾಣಪತ್ರ ವಿತರಿಸಿದರು. ಜಿಲ್ಲಾ ಮಟ್ಟದಲ್ಲಿ ಮೊದಲ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದರು.

ಅಟಲ್‌ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಚಾರ್ಯ ಚೆನ್ನಬಸವ ಹೇಡೆ, ಹಿರಿಯ ಸಾಹಿತಿ ಎಸ್‌.ಬಿ.ಕುಚಬಾಳ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಶಿವಕುಮಾರ ಉಪ್ಪೆ, ಪ್ರೊ. ಶ್ರೀಕಾಂತ ಪಾಟೀಲ ನಿರ್ಣಾಯಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT