ಮಂಗಳವಾರ, ಏಪ್ರಿಲ್ 20, 2021
24 °C
ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ವ್ಯವಸ್ಥೆ

ಬೀದರ್: ಶನೇಶ್ವರ ಮಂದಿರದಲ್ಲಿ ವಿಶೇಷ ಪೂಜೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಮಾವಾಸ್ಯೆ ಪ್ರಯುಕ್ತ ಭಾಲ್ಕಿ ತಾಲ್ಲೂಕಿನ ಖಾನಾಪುರ ಸಮೀಪದ ಶನೇಶ್ವರ ದೇವಸ್ಥಾನದಲ್ಲಿ ಶನಿವಾರ (ಮಾ.13) ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿ ವಿವಿಧೆಡೆಯ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶನೇಶ್ವರ ದೇವಸ್ಥಾನದ ಅಧ್ಯಕ್ಷ ಮಲಶೆಟ್ಟೆಪ್ಪ ಭಾಲ್ಕೆ ಹಾಗೂ ಯುವ ಸಮಿತಿ ಅಧ್ಯಕ್ಷ ಶರಣಪ್ಪ ಪಾಟೀಲ ತಿಳಿಸಿದ್ದಾರೆ.

ಭಕ್ತರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ ಎಂದು ಹೇಳಿದ್ದಾರೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಶನೇಶ್ವರರ ದರ್ಶನ ಪಡೆದು ಕೃತಾರ್ಥರಾಗಬೇಕು ಎಂದು ಮನವಿ ಮಾಡಿದ್ದಾರೆ.

ಕೋವಿಡ್ ಕಾರಣ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.