ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೈಹಿಕ ಕ್ರೀಡೆಯಿಂದ ಮಾನಸಿಕ ಸಾಮರ್ಥ್ಯ ವೃದ್ಧಿ’

Last Updated 3 ಡಿಸೆಂಬರ್ 2022, 11:10 IST
ಅಕ್ಷರ ಗಾತ್ರ

ಚಿಟಗುಪ್ಪ: ‘ದೈಹಿಕ ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ’ ಎಂದು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್ ರಾಚಪ್ಪ ಮಠಪತಿ ಹೇಳಿದರು.

ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದ ಗುರುನಾನಕ್‌ ಪಬ್ಲಿಕ್‌ ಶಾಲೆಯಲ್ಲಿ ನಡೆದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಿಂದ ಜೀವನದಲ್ಲಿ ಶಿಸ್ತು, ಸಂಯಮ ಹೆಚ್ಚುತ್ತದೆ. ಆರೋಗ್ಯವಂತ ವ್ಯಕ್ತಿಯಾಗಿ ಬದುಕಲು ಸಾಧ್ಯವಾಗುತ್ತದೆ ಎಂದರು.

ಗುರುನಾನಕ ಪಬ್ಲಿಕ್‌ ಶಾಲೆಯ ಉಪಾಧ್ಯಕ್ಷೆ ರೇಷ್ಮಾ ಕೌರ್‌ ಮಾತನಾಡಿ,‘ಶಿಕ್ಷಕರು, ಪಾಲಕರು ಮಕ್ಕಳ ಆಸಕ್ತಿಗೆ ತಕ್ಕ ಶಿಕ್ಷಣ ಒದಗಿಸಬೇಕು. ಅಂದಾಗ ಮಾತ್ರ ನಿಜವಾದ ಪ್ರತಿಭಾನ್ವಿತರು ಬೆಳೆಯುತ್ತಾರೆ’ ಎಂದರು.

ಪ್ರಾಚಾರ್ಯ ಇನಾಯತ್‌ ಪಾಶಾ, ಸಿಬ್ಬಂದಿ, ಪಾಲಕರು ಹಾಗೂ ಗಣ್ಯರು ಇದ್ದರು.

ಮಕ್ಕಳು ಪ್ರತಿಭೆ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT