ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಬೌಲಿಂಗ್ ಆಯ್ದುಕೊಂಡಿದೆ.
ಇಲ್ಲಿನ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.
ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5ರಂದು ಆರಂಭವಾಗಲಿದೆ. ಹೀಗಾಗಿ ಆತಿಥೇಯ ಭಾರತ ಮತ್ತು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡಗಳು ಅಂತಿಮ ಹಂತದ ಸಿದ್ಧತೆ ನಡೆಸುತ್ತಿವೆ.
ಸರಣಿಯ ಮೊದಲೆರಡು ಪಂದ್ಯಗಳಿಗೆ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಮಾತ್ರವಲ್ಲದೆ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ಅವರಿಗೂ ವಿಶ್ರಾಂತಿ ನೀಡಲಾಗಿದೆ. ಇದರಿಂದಾಗಿ ತಂಡದ ಬೆಂಚ್ ಶಕ್ತಿಯನ್ನು ಪರೀಕ್ಷಿಸಲು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಇದು ಕಡೆಯ ಅವಕಾಶವಾಗಿದೆ.
ಶ್ರೇಯಸ್ ಅಯ್ಯರ್ ಅವರು ತಮ್ಮ ಫಿಟ್‌ನೆಸ್ ಸಾಬೀತುಪಡಿಸಬೇಕಿದೆ. ಸೂರ್ಯಕುಮಾರ್ ಯಾದವ್ ಅವರಿಗೂ ಲಯಕ್ಕೆ ಮರಳುವ ಸವಾಲು ಇದೆ. ಇವರಿಬ್ಬರಿಗೂ ವಿಶ್ವಕಪ್ ತಂಡದಲ್ಲಿ ಆಡುವ ಅವಕಾಶ ಗಿಟ್ಟಿಸಲು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲೇಬೇಕಾದ ಒತ್ತಡದಲ್ಲಿದ್ದಾರೆ.
ಉಭಯ ಆಡುವ ಹನ್ನೊಂದರ ಬಳಗ
ಭಾರತ: ಕೆ.ಎಲ್. ರಾಹುಲ್ (ನಾಯಕ–ವಿಕೆಟ್‌ಕೀಪರ್), ಶುಭಮನ್ ಗಿಲ್, ಋತುರಾಜ್ ಗಾಯಕವಾಡ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ,
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಟ್ ಶಾರ್ಟ್, ಸೀನ್ ಅಬಾಟ್, ಆ್ಯಡಂ ಜಂಪಾ, ಜೋಶ್ ಇಂಗ್ಲಿಷ್ (ವಿಕೆಟ್‌ಕೀಪರ್)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.