ಬೀದರ್: ‘ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿ ತಿಳಿಸಿದರು.

ನಗರದ ನವೀನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಷಯ ಮನದಟ್ಟು ಮಾಡಿಕೊಳ್ಳುವ ದಿಸೆಯಲ್ಲಿ ಪಠ್ಯಕ್ರಮ ಪುನರಾವರ್ತನೆ ಮಾಡಿ, ಯೋಜನಾ ಬದ್ಧವಾಗಿ ಅಧ್ಯಯನ ಮಾಡಬೇಕು. ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿ, ಜಿಲ್ಲೆಯ ಫಲಿತಾಂಶ ಉತ್ತಮಪಡಿಸಲು ಕೈಜೋಡಿಸಬೇಕು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನೂ ಹೇಳಿಕೊಡಬೇಕು ಎಂದರು.

ಶಾಲೆಯ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ, ಶಾಲೆಯ ಕಾರ್ಯದರ್ಶಿ ಶೀಲಾ ಚಿಕ್ಕಬಸೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನೋಡಲ್ ಅಧಿಕಾರಿ ಸಚ್ಚಿದಾನಂದ, ಶಾಲೆ ಆಡಳಿತಾಧಿಕಾರಿ ಸುನೀತಾ, ಪ್ರಾಚಾರ್ಯೆ ಡೆನಿಟಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.