ಬೀದರ್: ಜಿಲ್ಲೆಯಾದ್ಯಂತ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಮೊದಲ ದಿನ ಯಾವುದೇ ರೀತಿಯ ಗೊಂದಲಗಳಿಲ್ಲದೇ ಸುಸೂತ್ರವಾಗಿ ಪರೀಕ್ಷೆ ಜರುಗಿತು.

ಜಿಲ್ಲೆಯ ಒಟ್ಟು 94 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 26,513 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಣಿ ಮಾಡಿಸಿದ್ದರು. ಈ ಪೈಕಿ 956 ವಿದ್ಯಾರ್ಥಿಗಳು ಗೈರಾದರು. ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ಇಂಗ್ಲಿಷ್, ಮರಾಠಿ, ಉರ್ದು ಪತ್ರಿಕೆ ಪರೀಕ್ಷೆ ನಡೆಯಿತು.

ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಕೇಂದ್ರದ ಸುತ್ತ ಪೊಲೀಸ್ ಪಹರೆ ಹಾಕಲಾಗಿತ್ತು. ಜಿಲ್ಲಾ ಪಂಚಾಯಿತಿಯಲ್ಲಿ ವೆಬ್ಕಾಸ್ಟಿಂಗ್ಗೆ ವ್ಯವಸ್ಥೆ ಮಾಡಲಾಗಿತ್ತು. ಏ. 2ರ ವರೆಗೆ ಪರೀಕ್ಷೆಗಳು ಜರುಗಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.