ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ

‘ಸಾಧನೆಗೆ ಬೇಕಿರುವುದು ಅಚಲ ವಿಶ್ವಾಸ, ದೃಢ ನಂಬಿಕೆ’
Published 10 ಮೇ 2024, 15:51 IST
Last Updated 10 ಮೇ 2024, 15:51 IST
ಅಕ್ಷರ ಗಾತ್ರ

ಭಾಲ್ಕಿ: ‘ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆಗೈಯಲು ವಿದ್ಯಾರ್ಥಿಗಳಿಗೆ ಬೇಕಿರುವುದು ಅಚಲ ವಿಶ್ವಾಸ, ದೃಢ ನಂಬಿಕೆ’ ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ‘ಶಿಕ್ಷಣ ಹರಿಯುವ ನೀರಿನಂತೆ ನಿತ್ಯ ನೂತನವಾಗಿರುತ್ತದೆ. ವಿದ್ಯಾರ್ಥಿಗಳು ಪ್ರತಿದಿನ ಶೈಕ್ಷಣಿಕ ಕ್ಷೇತ್ರದಲ್ಲಿ ಆಗುತ್ತಿರುವ ಹೊಸ ಸಂಶೋಧನೆ, ಅನ್ವೇಷಣೆ ಕುರಿತು ತಿಳಿದುಕೊಂಡು ಜ್ಞಾನದ ಹರಿವು ಹೆಚ್ಚಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ನಮ್ಮ ಶಾಲೆಯಲ್ಲಿ ದೊರೆಯುತ್ತಿರುವ ಗುಣಾತ್ಮಕ, ಸಂಸ್ಕಾರವಂತ ಶಿಕ್ಷಣದ ಫಲವಾಗಿ ವಿದ್ಯಾರ್ಥಿನಿ ಅಂಜಲಿ ನಾಗನಾಥ ರಾಜ್ಯ ಮಟ್ಟದಲ್ಲಿ 5ನೇ ರ್‍ಯಾಂಕ್‌, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಸಂತಸ ತರಿಸಿದೆ. ಸುಮಾರು 94 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ, ಸುಮಾರು 100ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಇಂಗ್ಲಿಷ್ ಮಾಧ್ಯಮ ಶಾಲೆಗಳತ್ತ ತಮ್ಮ ಒಲವು ತೋರುತ್ತಿದ್ದಾರೆ. ಆದರೆ, ನಮ್ಮ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಎಂಬಿಬಿಎಸ್, ಐಐಟಿ ಕಾಲೇಜುಗಳಲ್ಲಿ ಪ್ರವೇಶ ಪಡೆದು ಅತ್ಯುತ್ತಮ ವೈದ್ಯರು, ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದು ತಿಳಿಸಿದರು.

ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಗ್ರಾಮೀಣ ಭಾಗದ ಬಡ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಶಿಕ್ಷಣ ನೀಡುವ ಸದುದ್ದೇಶದಿಂದ ಬಸವಲಿಂಗ ಪಟ್ಟದ್ದೇವರು ಗುರುಕುಲ ಸಂಸ್ಥೆಯನ್ನು ಆರಂಭಿಸಿದ್ದಾರೆ. ಇಂದು ಹೆಮ್ಮರವಾಗಿ ಬೆಳೆದಿರುವ ನಮ್ಮ ಶಿಕ್ಷಣ ಸಂಸ್ಥೆ ಪ್ರತಿಭಾವಂತ ವಿದ್ಯಾರ್ಥಿಗಳ ಕೇಂದ್ರವಾಗಿ ರೂಪುಗೊಂಡಿದೆ. ಶಿಕ್ಷಣ ಸಂಸ್ಥೆಯ ಏಳಿಗೆಯಲ್ಲಿ ಶಿಕ್ಷಕರ, ಸಿಬ್ಬಂದಿಯ ಅಪಾರ ಶ್ರಮವಿದೆ’ ಎಂದು ಹೇಳಿದರು.

ಸಾಧಕ ವಿದ್ಯಾರ್ಥಿಗಳಾದ ಅಂಜಲಿ, ಭಾಗ್ಯಲಕ್ಷ್ಮಿ, ಮಹಾಲಕ್ಷ್ಮಿ, ಸಾಕ್ಷಿ, ಪಂಕಜಾ, ಐಶ್ವರ್ಯಾ, ಅಂಕಿತಾ, ರಾಜೇಶ್ವರಿ, ವೇದಿಕಾ ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕ ಮಹೇಶ ಮಹಾರಾಜ್, ಎಸ್ ಎಸ್ ಎಲ್ ಸಿ ಸಂಯೋಜಕ ಪ್ರವೀಣ ಖಂಡಾಳೆ, ಶಿಕ್ಷಕರಾದ ಸಂತೋಷ ಪತಂಗೆ, ಲಕ್ಷ್ಮಣ ಮೇತ್ರೆ, ಪಂಡರಿನಾಥ ಪವಾರ್, ರಾಜಕುಮಾರ ಮೋರಗೆ ಸೇರಿದಂತೆ ಇತರರು ಹಾಜರಿದ್ದರು.

ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಾಧಕರನ್ನು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿದರು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಾಧಕರನ್ನು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT