ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್.ಟಿ. ಸಮುದಾಯ ಭವನ ಕಾಮಗಾರಿ ವೀಕ್ಷಣೆ

ಭವನ ಸದುಪಯೋಗ: ಮಾಜಿ ಸಚಿವ ಎಚ್.ಎಂ. ರೇವಣ್ಣ ಮನವಿ
Last Updated 13 ಸೆಪ್ಟೆಂಬರ್ 2022, 17:00 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಗುರುದ್ವಾರ ಸಮೀಪ ಚಿಕ್ಕಪೇಟೆ ರಿಂಗ್ ರಸ್ತೆ ಬದಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೊಮ್ಮಗೊಂಡೇಶ್ವರ ಎಸ್.ಟಿ. ಸಮುದಾಯ ಭವನಕ್ಕೆ ಮಾಜಿ ಸಚಿವ ಎಚ್.ಎಂ. ರೇವಣ್ಣ ಮಂಗಳವಾರ ಭೇಟಿ ನೀಡಿದರು.

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ ಅವರು ಭವನದ ಕಾಮಗಾರಿಯ ಮಾಹಿತಿ ನೀಡಿದರು.
ಜಿಲ್ಲಾ ಕೇಂದ್ರದಲ್ಲಿ ಸಮುದಾಯ ಭವನ ನಿರ್ಮಿಸಬೇಕು ಎನ್ನುವುದು ಸಮಾಜದ ಬಹು ದಿನಗಳ ಬೇಡಿಕೆಯಾಗಿತ್ತು. ನಿಗಮದ ಅಧ್ಯಕ್ಷನಾಗಿದ್ದಾಗ ಅಂದಿನ ಜಿಲ್ಲಾಧಿಕಾರಿ ಪಿ.ಸಿ. ಜಾಫರ್ ಅವರಿಗೆ ಮನವರಿಕೆ ಮಾಡಿ ಭವನಕ್ಕೆ 1 ಎಕರೆ 10 ಗುಂಟೆ ಜಮೀನು ಮಂಜೂರು ಮಾಡಿಸಿದ್ದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹಾಗೂ ತಾವು ನನ್ನ ಮನವಿಗೆ ಸ್ಪಂದಿಸಿ, ಸರ್ಕಾರದಿಂದ ರೂ. 5 ಕೋಟಿ ಅನುದಾನ ಮಂಜೂರು ಮಾಡಿಸಿದ್ದೀರಿ. ಇದೀಗ ಭವನದ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಶೀಘ್ರ ಸಮುದಾಯದ ಬಹು ದಿನಗಳ ಕನಸು ನನಸಾಗಲಿದೆ ಎಂದು ಅವರು ತಿಳಿಸಿದರು.

ಭವನಕ್ಕೆ ನಿವೇಶನ ಹಾಗೂ ಅನುದಾನ ಮಂಜೂರು ಮಾಡಿಸುವ ಮೂಲಕ ಪಂಡಿತರಾವ್ ಚಿದ್ರಿ ಅವರು ಜಿಲ್ಲೆಯಲ್ಲಿ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಸಮಾಜ ಪರ ಅವರ ಕಾಳಜಿ ಶ್ಲಾಘನೀಯ ಎಂದು ರೇವಣ್ಣ ಹೇಳಿದರು.
ಸಮುದಾಯ ಭವನದ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿರುವುದು ಸಂತಸದ ಸಂಗತಿ. ಜಿಲ್ಲೆಯ ಸಮುದಾಯದ ಜನ ಬರುವ ದಿನಗಳಲ್ಲಿ ಭವನದ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೀತಾ ಚಿದ್ರಿ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುರಳಿಧರ ಎಕಲಾರಕರ್, ಕಾಂಗ್ರೆಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಬಸವರಾಜ ಬುಳ್ಳಾ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯಕುಮಾರ ಕಾಶೆಂಪುರ, ಪ್ರಮುಖರಾದ ಎಂ.ಎಸ್. ಕಟಗಿ, ಮಾಳಪ್ಪ ಅಡಸಾರೆ, ಪಾಂಡುರಂಗ ಇಟಕಂಪಳ್ಳಿ, ಬಾಬು ಗೊಂಡ, ಗುರುನಾಥ ಭೂರೆ, ವಿಜಯಕುಮಾರ ಡುಮ್ಮೆ, ಜಗದೇವಿ ಮೊದಲಾದವರು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT