ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೊಂದು ಕೃಷಿ ಕಾಲೇಜು ಆರಂಭಿಸಿ: ಕೃಷಿಕ ಸಮಾಜ ಮುಖಂಡರ ಒತ್ತಾಯ

ಕೃಷಿಕ ಸಮಾಜ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ
Last Updated 6 ಆಗಸ್ಟ್ 2021, 12:57 IST
ಅಕ್ಷರ ಗಾತ್ರ

ಬೀದರ್: ಕೃಷಿಗೆ ಉತ್ತೇಜನ ನೀಡಲು ಜಿಲ್ಲೆಗೊಂದು ಕೃಷಿ ಕಾಲೇಜು ಹಾಗೂ ಅಲ್ಪಾವಧಿ ಕೃಷಿ ಡಿಪ್ಲೊಮಾ ಕೋರ್ಸ್ ಆರಂಭಿಸಬೇಕು ಎಂದು ಭಾರತ ಕೃಷಿಕ ಸಮಾಜ ಹಾಗೂ ಕೃಷಿಕ ಸಮಾಜ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾರತ ಕೃಷಿಕ ಸಮಾಜದ ರಾಷ್ಟ್ರೀಯ ಆಡಳಿತ ಮಂಡಳಿ ಸದಸ್ಯ ಶಾಂತಕುಮಾರ ಮುದಾಳೆ, ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ಹಾಗೂ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪೂರ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.

ಕೃಷಿಗೆ ಸಂಬಂಧಿಸಿದ ಹೊಸ ಕೋರ್ಸ್‍ಗಳನ್ನು ಆರಂಭಿಸಿದರೆ ರೈತರ ಮಕ್ಕಳು ಆಧುನಿಕ ತಂತ್ರಜ್ಞಾನಗಳೊಂದಿಗೆ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.

ಯುವಕರನ್ನು ಕೃಷಿಯತ್ತ ಆಕರ್ಷಿಸಲು ಕೃಷಿ ಲಾಭದಾಯಕವಾಗಿಸುವ ದಿಸೆಯಲ್ಲಿ ಯೋಜನೆ ರೂಪಿಸಬೇಕು. ಉಪ ಕಸುಬುಗಳನ್ನೂ ಪ್ರೋತ್ಸಾಹಿಸಬೇಕು ಎಂದು ಬೇಡಿಕೆ ಮಂಡಿಸಿದರು.

ರಾಜ್ಯ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಶಿಷ್ಯವೇತನ ಪ್ರಕಟಿಸಿರುವುದು ಸಂತಸ ಉಂಟು ಮಾಡಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಅವರು ಭಾರತ ಕೃಷಿಕ ಸಮಾಜ ಹಾಗೂ ಕೃಷಿಕ ಸಮಾಜದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಂತಕುಮಾರ ಮುದಾಳೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT