ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್–ಬೆಂಗಳೂರು ವಿಮಾನ ಪುನಃ ಹಾರಾಡಲಿ: ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಆಗ್ರಹ

Published 23 ಫೆಬ್ರುವರಿ 2024, 15:54 IST
Last Updated 23 ಫೆಬ್ರುವರಿ 2024, 15:54 IST
ಅಕ್ಷರ ಗಾತ್ರ

ಬೀದರ್‌: ಬೀದರ್‌ ಹಾಗೂ ಬೆಂಗಳೂರು ನಡುವೆ ವಿಮಾನಯಾನ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಬೀದರ್‌ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಆಗ್ರಹಿಸಿದೆ.

ಈ ಸಂಬಂಧ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ, ಪ್ರಧಾನ ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಅವರು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

‘ಸ್ಟಾರ್‌ ಏರ್‌’ ಪ್ರೈವೇಟ್‌ ಲಿಮಿಟೆಡ್ ಜೊತೆಗಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ವಿಮಾನ ಸೇವೆ ಸ್ಥಗಿತಗೊಂಡಿದೆ. ಪ್ರಯಾಣಿಕರ ಕೊರತೆಯೂ ಇದಕ್ಕೆ ಕಾರಣ ಕೊಡಲಾಗಿದೆ. ಆದರೆ, ವಿಮಾನ ಸಮಯಕ್ಕೆ ಸರಿಯಾಗಿ ಹಾರಾಡದಿರುವುದು, ಪದೇ ಪದೇ ಕೊನೆಯ ಗಳಿಗೆಯಲ್ಲಿ ರದ್ದಾಗುತ್ತಿದ್ದ ಕಾರಣ ಪ್ರಯಾಣಿಕರು ಒಲವು ತೋರಿರಲಿಲ್ಲ ಎಂದು ತಿಳಿಸಿದ್ದಾರೆ.

ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಸಮಯ ನಿಗದಿಪಡಿಸಿ ಬೀದರ್‌–ಬೆಂಗಳೂರು ನಡುವೆ ವಿಮಾನಯಾನ ಸೇವೆ ಆರಂಭಿಸುವ ಅಗತ್ಯವಿದೆ. ಹೀಗೆ ಮಾಡುವುದರಿಂದ ಸಂಸ್ಥೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT