ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಟಿ ಭವನ ಕಾಮಗಾರಿಗೆ ಚಾಲನೆ

ಚಿಲ್ಲರ್ಗಿ, ಗಾದಗಿಯಲ್ಲಿ ಭೂಮಿಪೂಜೆ ನೆರವೇರಿಸಿದ ಎಂಎಲ್ಸಿ ಮಲ್ಕಾಪುರೆ
Last Updated 25 ಮಾರ್ಚ್ 2023, 13:23 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲೂಕಿನ ಚಿಲ್ಲರ್ಗಿ ಹಾಗೂ ಗಾದಗಿ ಗ್ರಾಮದಲ್ಲಿ ಎಸ್ಟಿ ಭವನ ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.

ಎರಡು ಕಡೆ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಎರಡು ಗ್ರಾಮಗಳಲ್ಲಿ ತಲಾ 20 ಲಕ್ಷ ಸೇರಿ ಒಟ್ಟು 40 ಲಕ್ಷ ರೂ.ಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಭಾಗದ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಕಾಮಗಾರಿಗಳನ್ನು ಗುಣಮಟ್ಟದಿಂದ ನಡೆಸಬೇಕು ಹಾಗೂ ಕಾಲಮತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಕೇಂದ್ರ, ರಾಜ್ಯದ ಡಬಲ್ ಇಂಜಿನ್ ಸರ್ಕಾರ ಮೂಲಭೂತ ಸೌಕರ್ಯ ಜತೆಗೆ ರೈತರು, ಬಡವರ ಆರ್ಥಿಕಮಟ್ಟ ಸುಧಾರಣೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲಿ ಮೊದಲ ಸ್ಥಾನದಲ್ಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವg ಜನಪರ ಆಡಳಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖರಾದ ಪೀರಪ್ಪ ಯರನಳ್ಳಿ, ರಾಜೇಂದ್ರ ಪೂಜಾರಿ, ಪಂಢರಿನಾಥ ಲದ್ದೆ, ವಿಜಯಕುಮಾರ ಆನಂದೆ, ಅರವಿಂದ ಪಾಟೀಲ್, ವಿಷ್ಣುದಾಸ, ಬಲರಾಜ ಠಾಕೂರ್, ಪ್ರಕಾಶ ಖಿಂಡಿ, ರಾಜಕುಮಾರ ಪಾಟೀಲ್ ಗುನ್ನಳ್ಳಿ, ಸತ್ಯವತಿ ರಾಜಕುಮಾರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT