ಮಂಗಳವಾರ, ಆಗಸ್ಟ್ 16, 2022
29 °C

ರಾಜ್ಯಮಟ್ಟದ ಕೃಷಿ ಕವನಗೋಷ್ಠಿ 23ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವಾಡ: ರೈತ ದಿನಾಚರಣೆ ಪ್ರಯುಕ್ತ ಬೀದರ್ ತಾಲ್ಲೂಕಿನ ಜನವಾಡ ಹತ್ತಿರ ಇರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಡಿ. 23 ರಂದು ರಾಜ್ಯಮಟ್ಟದ ಕೃಷಿ ಕವನ ಗೋಷ್ಠಿ ಹಾಗೂ ಕೃಷಿ ಮತ್ತು ಗ್ರಾಮೀಣ ಬದುಕು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾಹಿತಿ ಪಾರ್ವತಿ ಸೋನಾರೆ ಅವರನ್ನು ಕವಿಗೋಷ್ಠಿಯ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಲಾಗಿದೆ.

ಕವಿಗೋಷ್ಠಿಯಲ್ಲಿ ಭಾಗವಹಿಸ ಬಯಸುವ ಸಾಹಿತಿಗಳು ಸ್ವರಚಿತ ಹಾಗೂ ಹಾಗೂ ಈ ಮೊದಲು ಪ್ರಕಟವಾಗದ ಕವನಗಳನ್ನು ಕೃಷಿ ವಿಜ್ಞಾನ ಕೇಂದ್ರಕ್ಕೆ ಕಳುಹಿಸಬಹುದು. ಇಲ್ಲವೇ ಒಂದು ಕವಿತೆಯನ್ನು ಮಾತ್ರ ಡಿಸೆಂಬರ್ 15 ರ ಸಂಜೆ 5 ಗಂಟೆಯ ಒಳಗೆ ನುಡಿ ತಂತ್ರಾಂಶದಲ್ಲಿ ಇ ಮೇಲ್ (kvkbidar2013@gmail.com) ಗೆ ಕಳುಹಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ತಿಳಿಸಿದ್ದಾರೆ.

ಕೋವಿಡ್ ಕಾರಣ ಆಯ್ದ 25 ಕವಿಗಳಿಗೆ ಕವನ ವಾಚನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗೆ 9480696318 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.