ಗುರುವಾರ , ಮಾರ್ಚ್ 30, 2023
32 °C

28ಕ್ಕೆ ರಾಜ್ಯ ಮಟ್ಟದ ಅನುಭವ ಮಂಟಪ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ರಾಜ್ಯಮಟ್ಟದ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟವು ನವೆಂಬರ್ 28ರಂದು ಜರುಗಲಿದೆ.

ನಗರದ ಅನುಭವ ಮಂಟಪದಲ್ಲಿ ಸೋಮವಾರ ನಡೆದ ಉತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ವಿಶ್ವ ಬಸವಧರ್ಮ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಪ್ರತಿವರ್ಷ ಮೂರು ದಿನಗಳವರೆಗೆ ಉತ್ಸವ ಜರುಗುತ್ತಿತ್ತು. ಕೋವಿಡ್ ಕಾರಣ ಈ ವರ್ಷ ಒಂದು ದಿನ ನಡೆಯಲಿದೆ. ಗೋಷ್ಠಿ, ಪ್ರಶಸ್ತಿ ಪ್ರದಾನ ಹಾಗೂ ಇತರೆ ಚಟುವಟಿಕೆಗಳು ನಡೆಯಲಿವೆ. ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಅವರು ಉತ್ಸವವನ್ನು ಉದ್ಘಾಟಿಸುವರು’ ಎಂದು ತಿಳಿಸಿದರು.

ಶಾಸಕ ಶರಣು ಸಲಗರ ಅವರನ್ನು ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಸತ್ಕರಿಸಲಾಯಿತು.

ಹುಲಸೂರ ಶಿವಾನಂದ ಸ್ವಾಮೀಜಿ, ಭಾಲ್ಕಿ ಗುರುಬಸವ ಪಟ್ಟದ್ದೇವರು, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಬಸವರಾಜ ಧನ್ನೂರ, ಶಿವರಾಜ ನರಶೆಟ್ಟಿ, ಶಶಿಕಾಂತ ದುರ್ಗೆ, ಜಯರಾಜ ಖಂಡ್ರೆ, ಡಾ.ಜಗನ್ನಾಥ ಹೆಬ್ಬಾಳೆ, ಗುರುನಾಥ ಗಡ್ಡೆ, ನವಲಿಂಗಕುಮಾರ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು