ಬುಧವಾರ, ಅಕ್ಟೋಬರ್ 23, 2019
25 °C

ಮಂಗಲಾ ಭಾಗವತ್‌ಗೆ ರಾಜ್ಯಮಟ್ಟದ ಪ್ರಶಸ್ತಿ

Published:
Updated:
Prajavani

ಬೀದರ್: ಇಲ್ಲಿಯ ಪ್ರಧಾನ ಅಂಚೆ ಕಚೇರಿಯ ಪಾಸ್‌ಪೋರ್ಟ್ ಸೇವಾ ಕೇಂದ್ರದ ಅಧಿಕಾರಿ ಮಂಗಲಾ ಭಾಗವತ್ ಅವರನ್ನು ರಾಜ್ಯಮಟ್ಟದ ಡಾಕ್ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಂಚೆ ಇಲಾಖೆಯಲ್ಲಿ ಸಲ್ಲಿಸಿದ ಮೂರು ದಶಕಗಳ ಉತ್ತಮ ಸೇವೆಗಾಗಿ ಅವರಿಗೆ ಪ್ರಶಸ್ತಿ ಲಭಿಸಿದೆ. ಮಂಗಲಾ ಅವರು ವೃತ್ತಿಯ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿ ಇದ್ದಾರೆ. ಸೇವಾ ಮನೋಭಾವ, ಸ್ನೇಹಪರ ಸ್ವಭಾವಕ್ಕೆ ಹೆಸರಾಗಿದ್ದಾರೆ.

ರಾಜ್ಯಮಟ್ಟದ ಡಾಕ್ ಸೇವಾ ಪ್ರಶಸ್ತಿಗೆ ಆಯ್ಕೆಯಾದ ಕಲ್ಯಾಣ ಕರ್ನಾಟಕದ ಮೊದಲ ಮಹಿಳಾ ಅಧಿಕಾರಿ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ.

ಮಂಗಳೂರಿನಲ್ಲಿ ಅಕ್ಟೋಬರ್ 12 ರಿಂದ 15 ರ ವರೆಗೆ ನಡೆಯಲಿರುವ ‘ಕರ್ನಾಪೆಕ್ಸ್-2019’ ಕಾರ್ಯಕ್ರಮದಲ್ಲಿ ಅಕ್ಟೋಬರ್‌ 12 ರಂದು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ನಾಲ್ಕು ದಿನಗಳ ಅಂಚೆ ಚೀಟಿ ಸಂಗ್ರಹಗಳ ಪ್ರದರ್ಶನವನ್ನು ಸಂತೋಷ ಹೆಗಡೆ ಉದ್ಘಾಟಿಸುವರು. ಅಂಚೆ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ ವಿಶ್ವಪವನಪತಿ, ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಚಾರ್ಲ್ಸ್‌ ಲೋಬೊ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ಬೆಂಗಳೂರು ವಲಯದ ಪೋಸ್ಟ್ ಮಾಸ್ಟರ್ ಜನರಲ್ ಸೇರಿ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಳ್ಳುವರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)