ಬೀದರ್: ಪಂಡಿತ್ ಪಂಚಾಕ್ಷರ ಗವಾಯಿ ಅವರ 81ನೇ ಪುಣ್ಯತಿಥಿ, ಪಂಡಿತ ಪುಟ್ಟರಾಜ ಕವಿ ಗವಾಯಿ ಅವರ 15ನೇ ಪುಣ್ಯತಿಥಿ ಹಾಗೂ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ 23ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ಸಂಗೀತ ಸಮ್ಮೇಳನ, ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 6ರಂದು ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾಳೆ ತಿಳಿಸಿದರು.

ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘ ಬೀದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ. ಭಾಲ್ಕಿಯ ಹಿರಿಯ ಸಂಗೀತ ಶಿಕ್ಷಕ ಪ್ರೊ. ಎಸ್.ಕೆ. ಪಾಟೀಲ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಅಂದು ಬೆಳಿಗ್ಗೆ 10.30ಕ್ಕೆ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ. ವೀರಣ್ಣ ಉದ್ಘಾಟಿಸುವರು. ನಿವೃತ್ತ ಪ್ರಾಧ್ಯಾಪಕ ಎಸ್.ವಿ. ಕಲ್ಮಠ ರಚಿತ ‘ಕುಮಾರ ಕೃಪಾ ಕೋವಿಡ್ ಗೆದ್ದವರ ಕೈತೋಟ ಕೈಪಿಡಿ’ ಕೃತಿ ಬಿಡುಗಡೆಗೊಳ್ಳಲಿದೆ. ಮಧ್ಯಾಹ್ನ 2ರಿಂದ ಸಂಜೆ 6ರ ವರೆಗೆ ಸಂಗೀತ ಸಮ್ಮೇಳನ ನಡೆಯಲಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಭಜನಾ ಸಂಗೀತ ಹಾಗೂ ಭರತನಾಟ್ಯ ಕಾರ್ಯಕ್ರಮಗಳು ಜರುಗಲಿವೆ. ಪಂಡಿತ್ ರಾಮಲು ಗಾದಗಿ ಸೇರಿದಂತೆ ಹಲವಾರು ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಸಂಜೆ 6ರಿಂದ 7ರ ವರೆಗೆ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. 2025–26ನೇ ಸಾಲಿನ ಪಂಚಾಕ್ಷರ ಪ್ರಶಸ್ತಿಯನ್ನು ತಬಲಾ ವಾದಕ ಮಡಿವಾಳಯ್ಯ ಸಾಲಿ ಅವರಿಗೆ ಹಾಗೂ ಪುಟ್ಟರಾಜ ಪ್ರಶಸ್ತಿಯನ್ನು ಅಂಧ ಕಲಾವಿದ ಏಕನಾಥ ಸಿದ್ದಸುರೆ ಅವರಿಗೆ ಪ್ರದಾನ ಮಾಡಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು.

ಸಂಘದ ಗೌರವಾಧ್ಯಕ್ಷ ಎಸ್.ವಿ ಕಲ್ಮಠ ಮಾತನಾಡಿ, ಗಾನಯೋಗಿ ಪಂಚಾಕ್ಷರ ಗವಾಯಿ ಅವರ ಪುಣ್ಯತಿಥಿಯನ್ನು ಕಳೆದ 40 ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷ ತಪ್ಪದೇ ರಾಜ್ಯ ಮಟ್ಟದ ಸಂಗೀತ ಸಮ್ಮೇಳನಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ದಾನಿ ಬಾಬುರಾರ್, ಉಪಾಧ್ಯಕ್ಷ ರಾಜೇಂದ್ರಸಿಂಗ್ ಪವಾರ್, ಖಜಾಂಚಿ ಡಾ.ಬಿ.ಎಸ್ ಬಿರಾದಾರ, ಉದ್ಯಮಿ ಜೈರಾಜ್ ಖಂಡ್ರೆ, ರಾಜೇಂದ್ರ ಬಿರಾದಾರ, ಪುಂಡಲೀಕರಾವ್ ಪಾಟೀಲ್, ಕಂಟೆಪ್ಪ ಗಂದಿಗುಡೆ, ಸುರೇಶ ಮಾಶೆಟ್ಟಿ, ವೀರಭದ್ರಪ್ಪ ಉಪ್ಪಿನ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.