ಬೀದರ್: ‘ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಬೀದರ್‌ನಲ್ಲೇ ಆಯೋಜಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಭರವಸೆ ನೀಡಿದರು.

ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯಮಟ್ಟದ ಕ್ರೀಡಾಕೂಟ ಇಲ್ಲಿಯೇ ನಡೆಯಬೇಕು ಎನ್ನುವುದು ಜಿಲ್ಲೆಯ ಸರ್ಕಾರಿ ನೌಕರರ ಆಶಯವಾಗಿದೆ ಎಂದು ಹೇಳಿದರು.

‘ರಾಜ್ಯ ಸರ್ಕಾರ ನೌಕರರ ಬೇಡಿಕೆಗಳಿಗೆ ಸ್ಪಂದಿಸುತ್ತ ಬಂದಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಅನೇಕ ರಾಜ್ಯಗಳು ನೌಕರರ ವೇತನ ಕಡಿತಗೊಳಿಸಿದ್ದವು. ಆದರೆ, ರಾಜ್ಯ ಸರ್ಕಾರ ಮಾತ್ರ ಯಾವುದೇ ಕಡಿತ ಮಾಡದೆ ನೌಕರರ ಹಿತ ರಕ್ಷಿಸಿತು’ ಎಂದು ತಿಳಿಸಿದರು.

’ರಾಜೇಂದ್ರಕುಮಾರ ಗಂದಗೆ ಕ್ರಿಯಾಶೀಲರಾಗಿದ್ದಾರೆ. ನೌಕರರಿಗಾಗಿ ವಿವಿಧ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಚಟುವಟಿಕೆಗಳಿಗೆ ತಮ್ಮ ಸಹಾಯ, ಸಹಕಾರ ಸದಾ ಇರಲಿದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಮಾತನಾಡಿ, ‘ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ವ್ಯವಸ್ಥಿತವಾಗಿ ಸಂಘಟಿಸಲಾಗಿದೆ. ಆನ್‍ಲೈನ್ ನೋಂದಣಿ ಮೂಲಕ ಕ್ರೀಡಾಪಟುಗಳ ಸಮಯ ಹಾಗೂ ಹಣ ವ್ಯರ್ಥವಾಗುವುದನ್ನು ತಪ್ಪಿಸಲಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಬೀದರ್‌ನಲ್ಲೇ ಏರ್ಪಡಿಸುವ ಸಂಬಂಧ ಸರ್ಕಾರ ಹಾಗೂ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಕ್ರೀಡಾಜ್ಯೋತಿ ಸ್ವೀಕರಿಸಿದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಮಾತನಾಡಿ, ‘ಕ್ರೀಡಾಕೂಟಗಳು ನೌಕರರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಮೂಡಿಸಲು ನೆರವಾಗಲಿವೆ’ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ‘ನೌಕರರನ್ನು ಒತ್ತಡಮುಕ್ತಗೊಳಿಸಲು ಪ್ರತಿ ವರ್ಷ ಜಿಲ್ಲಾಮಟ್ಟದ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

ಸರ್ಕಾರಿ ನೌಕರರಲ್ಲೂ ಬಹಳಷ್ಟು ಕ್ರೀಡಾಪಟುಗಳು ಇದ್ದಾರೆ. ಕ್ರೀಡಾಕೂಟವು ಅವರಲ್ಲಿನ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಒದಗಿಸಲಿದೆ. ರಾಜ್ಯಮಟ್ಟದ ಕ್ರೀಡಾಕೂಟ ಬೀದರ್‌ನಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಸಂಘ ಪ್ರಯತ್ನ ನಡೆಸುತ್ತಿದೆ. ಅವಕಾಶ ದೊರೆತರೆ ರಾಜ್ಯದಲ್ಲೇ ಮಾದರಿಯಾಗಿ ಸಂಘಟಿಸಲಾಗುವುದು’ ಎಂದು ತಿಳಿಸಿದರು.

ಅನಿವಾರ್ಯ ಕಾರಣಕ್ಕಾಗಿ ದೆಹಲಿಗೆ ಬಂದಿರುವ ಕಾರಣ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ನೌಕರರು ಕ್ರೀಡಾಕೂಟದಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಕಳುಹಿಸಿದ ಸಂದೇಶವನ್ನು ಗಂದಗೆ ಓದಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇ ಘಾಳಿ ಇದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ ಸ್ವಾಗತಿಸಿದರು. ಶಿವಕುಮಾರ ಬಾವಗೆ ನಿರೂಪಿಸಿದರು. ರಾಜಕುಮಾರ ಹೊಸದೊಡ್ಡೆ ವಂದಿಸಿದರು.
ಇದಕ್ಕೂ ಮೊದಲು ರೋಟರಿ ಕನ್ನಡಾಂಬೆ ವೃತ್ತದಿಂದ ನೆಹರೂ ಕ್ರೀಡಾಂಗಣ ವರೆಗೆ ಕ್ರೀಡಾಜ್ಯೋತಿ ಮೆರವಣಿಗೆ ನಡೆಯಿತು.

1,680 ನೌಕರರು ಹೆಸರು ನೋಂದಣಿ
ಬೀದರ್: ನೆಹರೂ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿವಿಧ ಕ್ರೀಡೆಗಳು ನಡೆದವು. ಮೊದಲ ದಿನ 800 ಮೀಟರ್ ಓಟ, ವಾಲಿಬಾಲ್, ಕಬಡ್ಡಿ, ಕ್ರಿಕೆಟ್, ಡಿಸ್ಕಸ್ ಥ್ರೋ, ಶಾಟ್‍ಪಟ್, ಉದ್ದ ಜಿಗಿತ, ಎತ್ತರ ಜಿಗಿತ, ಚೆಸ್, ಕೇರಂ, ಷಟಲ್ ಬ್ಯಾಡ್ಮಿಂಟನ್, ಬ್ಯಾಸ್ಕೆಟ್‍ಬಾಲ್, ಥ್ರೋಬಾಲ್ ಮೊದಲಾದ ಕ್ರೀಡೆಗಳು ನಡೆದವು.

ನೌಕರರ ಸಂಘವು ಕ್ರೀಡಾಪಟುಗಳಿಗೆ ಟೀ ಶರ್ಟ್ ಹಾಗೂ ಟೊಪ್ಪಿಗೆ ವಿತರಿಸಿತು. ಕ್ರೀಡಾಕೂಟದಲ್ಲಿ ಪಾಲ್ಗೊಂಡವರಿಗೆ ಬೆಳಿಗ್ಗೆ ಚಹಾ, ಉಪಾಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ಜಿಲ್ಲೆಯ ಒಟ್ಟು 1,680 ಸರ್ಕಾರಿ ನೌಕರರು ಹೆಸರು ನೋಂದಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.