‘ಬೀದರ್ ಉತ್ಸವ’ಕ್ಕೆ ತಡೆ: ಮುಖ್ಯಮಂತ್ರಿ ಭರವಸೆ

7

‘ಬೀದರ್ ಉತ್ಸವ’ಕ್ಕೆ ತಡೆ: ಮುಖ್ಯಮಂತ್ರಿ ಭರವಸೆ

Published:
Updated:
Deccan Herald

ಬೀದರ್: ‘ಬೀದರ್ ಉತ್ಸವಕ್ಕೆ ತಡೆ ಒಡ್ಡಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್‌ ಹಾಗೂ ಡಾ. ಚಂದ್ರಶೇಖರ ಪಾಟೀಲ ಅವರೊಂದಿಗೆ ಬೆಳಗಾವಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಈ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

‘ಬರದ ಕಾರಣ ಜಿಲ್ಲೆಯಲ್ಲಿ ರೈತರು ಹಿಂಗಾರು ಹಾಗೂ ಮುಂಗಾರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಕೂಲಿ ಕಾರ್ಮಿಕರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದಾರೆ. ಕುಡಿಯುವ ನೀರು, ಮೇವಿಗೆ ಸಮಸ್ಯೆ ಎದುರಾಗಿದೆ. ಹೀಗಾಗಿ ಬೀದರ್ ಉತ್ಸವ ಆಚರಿಸಿ ಸಂಭ್ರಮಿಸುವುದು ಬೇಡ ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಬರಗಾಲ ಇರುವುದು ಗಮನದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಬೀದರ್ ಉತ್ಸವ ಆಚರಿಸುವುದು ಸರಿಯಲ್ಲ. ಸಂಬಂಧಪಟ್ಟವರಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಅವರು ಆಶ್ವಾಸನೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !