ಬಸವಕಲ್ಯಾಣ: ‘ಕನ್ಹೇರಿ ಸ್ವಾಮೀಜಿ ನೇತೃತ್ವದಲ್ಲಿ ಬಸವಣ್ಣನವರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಹಮ್ಮಿಕೊಳ್ಳುತ್ತಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ತಡೆಯೊಡ್ಡುವ ಬಗ್ಗೆ ಚರ್ಚಿಸಲು ಶೀಘ್ರದಲ್ಲಿ ಸಭೆ ನಡೆಸಲಾಗುತ್ತದೆ’ ಎಂದು ರಾಷ್ಟ್ರೀಯ ಬಸವದಳದ ತಾಲ್ಲೂಕು ಘಟಕದ ಅಧ್ಯಕ್ಷ ರವೀಂದ್ರ ಕೊಳಕೂರ ತಿಳಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ರಾಜ್ಯಾದ್ಯಂತ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ವಿನಾಕಾರಣ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಬಸವಾದಿ ಶರಣರ ಕಾರ್ಯಕ್ಕೆ ಚ್ಯುತಿ ಬರುವ ಕಾರ್ಯ ಮಾಡುತ್ತಿದ್ದಾರೆ. ಆದ್ದರಿಂದ ಅವರ ನೇತೃತ್ವದ ಸಮಾವೇಶಕ್ಕೆ ವಿರೋಧವಿದೆ. ಈ ಕಾರಣಕ್ಕಾಗಿ ಈ ಹಿಂದೆ ಕೆಲವೆಡೆ ಅವರಿಗೆ ರಾಜ್ಯ ಸರ್ಕಾರ ಜಿಲ್ಲಾ ಪ್ರವೇಶ ನಿಷೇಧ ಕೂಡ ಮಾಡಿತ್ತು’ ಎಂದಿದ್ದಾರೆ.

‘ಹಿಂದೂ ಸಮಾವೇಶ ನಡೆಸಿದರೆ ಅಡ್ಡಿಪಡಿಸುವುದಿಲ್ಲ. ಆದರೆ ಸಮಾನತೆ, ಸೌಹಾರ್ದ ಸಾರಿದ್ದ, ಧರ್ಮದ ಹೆಸರಿನಲ್ಲಿನ ಡಂಭಾಚಾರ, ಮೂಢನಂಬಿಕೆ ಖಂಡಿಸಿ ಕಾಯಕ, ದಾಸೋಹ ತತ್ವ ಸಾರಿರುವ ನೆಲದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಹಮ್ಮಿಕೊಳ್ಳುವುದು ಬಸವಣ್ಣನವರ ತತ್ವಕ್ಕೆ ವಿರೋಧ. ಇಂಥ ಕಾರ್ಯಕ್ರಮ ಆಯೋಜಿಸುವವರು ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿ ಆಗಬೇಕಾಗುತ್ತದೆ’ ಎಂದಿದ್ದಾರೆ.

‘ರಾಷ್ಟ್ರೀಯ ಬಸವದಳ, ಲಿಂಗಾಯತ ಮಹಾಸಭಾ, ಇಡೀ ಕಲಬುರಗಿ ವಿಭಾಗದ ಬಸವಪರ ಸಂಘಟನೆ ಪದಾಧಿಕಾರಿಗಳನ್ನು ಒಂದುಗೂಡಿಸಿ ಸಭೆ ನಡೆಸಲಾಗುತ್ತದೆ. ಸಮಾವೇಶ ತಡೆಯಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-33-1762888258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.