ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಬಲಪಡಿಸಿ

ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿಕೆ
Last Updated 3 ಜುಲೈ 2022, 13:47 IST
ಅಕ್ಷರ ಗಾತ್ರ

ಬೀದರ್‌: ‘ಮುಂಬರುವ ಚುನಾವಣೆಯಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತಾಗಲು ಪ್ರತಿಯೊಬ್ಬ ಕಾರ್ಯಕರ್ತರು ಪರಿಶ್ರಮ ಪಡಬೇಕು. ಈ ದಿಸೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ಹೋಟೆಲ್ ಸಪ್ನಾ ಇಂಟರ್‌ನ್ಯಾಷನಲ್‌ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಭಾರತೀಯ ಜನತಾ ಪಾರ್ಟಿಯ ಬೀದರ್ ನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

‘ಗೆಲುವಿನ ಹೆಜ್ಜೆ ಮುಂದಿಡಲು ಕಾರ್ಯಕರ್ತರು ಸೈನಿಕರಂತೆ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ಕಠಿಣ ಪರಿಶ್ರಮ ಪಡಬೇಕಾಗಿದೆ. ಈ ದಿಸೆಯಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕಾಗಿದೆ‘ ಎಂದರು.

‘ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ, ಬೀದರ್‌ ನಗರ ಕ್ಷೇತ್ರದಲ್ಲಿ 1999ರಿಂದ ಪಕ್ಷದ ಅಭ್ಯರ್ಥಿ ಗೆಲ್ಲಲು ಸಾಧ್ಯವಾಗಿಲ್ಲ. ಈ ಕೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು’ ಎಂದರು.

‘ಮಂಡಲದಲ್ಲಿರುವ 161 ಬೂತ್‌ಗಳ ಪೈಕಿ ಕನಿಷ್ಠ 100 ಬೂತ್‌ ಆಯ್ಕೆ ಮಾಡಿಕೊಂಡು ಮತದಾರರ ಮನೆ-ಮನೆಗೆ ತೆರಳಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಈಗಿನಿಂದ ಸಿದ್ಧತೆ ಆರಂಭಿಸಬೇಕು’ ಎಂದು ಮನವಿ ಮಾಡಿದರು.

ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಮಾತನಾಡಿ, ‘ಪಕ್ಷಕ್ಕೆ ಕಾರ್ಯಕರ್ತರೇ ಬೆನ್ನೆಲುಬು ಆಗಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಸಂಘಟಿತರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯುವ ದಿಸೆಯಲ್ಲಿ ಈಗಿನಿಂದಲೇ ಸಿದ್ಧತೆ ಶುರು ಮಾಡಬೇಕಗಿದೆ’ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ‘ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮ ಸರ್ಕಾರ ಇದೆ ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ನಮ್ಮ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದಾಗ ಮಾತ್ರ ನಮಗೆ ಗೌರವ ಸಿಗುತ್ತದೆ ಜನರು ಕೂಡ ನಮ್ಮತ್ತ ಒಲವು ತೋರಿಸುತ್ತಾರೆ ಹೀಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ’ ಎಂದು ತಿಳಿಸಿದರು.

ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ ಮಾತನಾಡಿ, ‘ನಗರ ಸಭೆ ಚುನಾವಣೆಯಲ್ಲಿ ಎರಡು ಅವಧಿಗೆ 1 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಿದ್ದೇನೆ. ಮುಂಬರುವ ದಿನಗಳಲ್ಲಿ ಮಹಾಶಕ್ತಿ ಕೇಂದ್ರಗಳನ್ನು ರಚಿಸಿ ಪಕ್ಷಕ್ಕೆ ಇನ್ನಷ್ಟು ಶಕ್ತಿತುಂಬುವ ಸಂಕಲ್ಪ ಮಾಡಿದ್ದೇನೆ ಎಂದರು.

ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ರಾಜ್ಯ ಹಜ್‌ ಸಮಿತಿ ನೂತನ ಅಧ್ಯಕ್ಷ ರೌಫೋದ್ದಿನ್‌ ಕಚೇರಿವಾಲೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ವಾಲಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಬಿಜೆಪಿ ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ಗುರುನಾಥ ಕೊಳ್ಳುರ್. ವಿಜಯಕುಮಾರ ಪಾಟೀಲ ಗಾದಗಿ, ಸಂಗಮೇಶ ನಾಸಿಗಾರ, ವಿದ್ಯಾಸಾಗರ ಶಾಬಾದಿ, ಜಯಕುಮಾರ ಕಾಂಗೆ, ಗುರುನಾಥ ಜ್ಯಾಂತಿಕರ್, ಪ್ರಕಾಶ ಟೊಣ್ಣೆ, ಬಾಬುರಾವ್ ಮದಕಟ್ಟಿ, ಎನ್‌.ಆರ್. ವರ್ಮಾ, ರೇವಣಸಿದ್ದಪ್ಪ ಜಲಾದೆ, ರಾಜಕುಮಾರ ಚಿದ್ರಿ, ಅರಹಂತ ಸಾವಳೆ, ಮಲ್ಲಿಕಾರ್ಜುನ ಕುಂಬಾರ, ಕಿರಣ ಪಾಟೀಲ, ಮಹೇಶ್ವರ ಸ್ವಾಮಿ, ಚಂದ್ರಕಲಾ ವಿಶ್ವಕರ್ಮ, ಪ್ರಸನ್ನಲಕ್ಷ್ಮಿ ದೇಶಪಾಂಡೆ, ಮಹೇಶ ಪಾಲಂ, ಗಣೇಶ ಭೋಸ್ಲೆ ಇದ್ದರು.

ವಿವಿಧ ಮೋರ್ಚಾಗಳು ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸುಭಾಷ ಮಡಿವಾಳ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT