ಗುರುವಾರ , ಅಕ್ಟೋಬರ್ 22, 2020
24 °C

ಪಕ್ಷದ ಸಂಘಟನೆ ಇನ್ನಷ್ಟು ಬಲಪಡಿಸಿ: ‌ಸಂಸದ ಭಗವಂತ ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಬಿಜೆಪಿಯ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪದಾಧಿಕಾರಿಗಳು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜತೆಗೆ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ನೌಬಾದ್‌ನ ಫಕ್ಷನ್‌ಹಾಲ್‌ನಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಿಜೆಪಿ ಜಗತ್ತಿನ ನಂಬರ್ ಒನ್ ಪಾರ್ಟಿ ಆಗಿದೆ. ಪಕ್ಷದಲ್ಲಿ ಸಂಘಟನೆಗೆ ಮೊದಲ ಆದ್ಯತೆ ಇದೆ. ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಬೇಕು. ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮ ಪಕ್ಷ ಆಡಳಿತದಲ್ಲಿದ್ದು, ಸರ್ಕಾರದ ಜನಪರ ಯೋಜನೆಗಳು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಕಲಬುರಗಿ ವಿಭಾಗ ಮಟ್ಟದ ಸಂಘಟನಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ತೂಗಾಂವಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅರಹಂತ ಸಾವಳೆ, ಅಶೋಕ ಹೊಕ್ರಾಣೆ, ಮಲ್ಲಿಕಾರ್ಜುನ ಕುಂಬಾರ, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಶಿವರಾಜ ಗಂದಗೆ, ಜಯಕುಮಾರ ಕಾಂಗೆ, ಬಸವರಾಜ ಜೋಜನಾ ಇತರರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು