ಮಂಗಳವಾರ, ಸೆಪ್ಟೆಂಬರ್ 21, 2021
28 °C

ಅಕ್ರಮ ಸ್ಕ್ಯಾನಿಂಗ್ ಸೆಂಟರ್ ನಡೆಸಿದರೆ ಕಠಿಣ ಕ್ರಮ: ರಾಮಚಂದ್ರನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಜಿಲ್ಲೆಯಲ್ಲಿ ಅನುಮತಿ ಪಡೆಯದೇ ಸ್ಕ್ಯಾನಿಂಗ್‌ ಸೆಂಟರ್‌ಗಳು ನಡೆಯುತ್ತಿದ್ದರೆ ತಕ್ಷಣ ಅವುಗಳನ್ನು ಬಂದ್‌ ಮಾಡಿಸಬೇಕು. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪಿ.ಸಿ, ಪಿ.ಎನ್.ಡಿ.ಟಿ. ಜಿಲ್ಲಾ ಸಲಹಾ ಸಮಿತಿ, ತಪಾಸಣೆ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

12 ವಾರಕ್ಕಿಂತ ಮೇಲ್ಪಟ್ಟ ಹಾಗೂ 20 ವಾರಕ್ಕಿಂತ ಕಡಿಮೆ ಅವಧಿಯ ಗರ್ಭಪಾತ ಮಾಡಲು ಅನುಮತಿ ಕಡ್ಡಾಯ.
ಸಕಾರಣವಿಲ್ಲದ ಗರ್ಭಪಾತಕ್ಕೆ ಅವಕಾಶ ನೀಡಬಾರದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ ಬಿ. ಮಾತನಾಡಿದರು.

ಸ್ತ್ರೀರೋಗ ತಜ್ಞ ಡಾ.ಆರತಿ ಆರ್. ಕೃಷ್ಣಮೂರ್ತಿ, ಬೀದರ್‌ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಡಾ.ರಾಜಶೇಖರ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು